ಸಂಧ್ಯಾ ಕಾಲೇಜು ಸೆ.2ರಂದು ತನ್ನ ದ್ವಿತೀಯ ಸ್ಥಾಪಕ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದೆ.
Advertisement
ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವದ ಹೊಸ್ತಿಲಿನಲ್ಲಿ ಪ್ರಾರಂಭವಾದ ಈ ಹೊಸ ಕಾಲೇಜು ಇಂದು ಎರಡುವರ್ಷಗಳನ್ನು ಪೂರೈಸುತ್ತಿದೆ. ಈ ಹೊಸ ಕಾಲೇಜು ತನ್ನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಂದ ಕರಾವಳಿ ಹಾಗೂ
ಮಲೆನಾಡು ಭಾಗದ ವಿದ್ಯಾರ್ಥಿಗಳನ್ನು ಆಕರ್ಷಿಸುವಲ್ಲಿ ಸಫಲವಾಗಿದೆ. ಇಲ್ಲಿ ಶೈಕ್ಷಣಿಕ ಚಟುವಟಿಕೆಗಳ ಜತೆಗೆ ವಿದ್ಯಾರ್ಥಿಗಳು
ತಮ್ಮ ಭವಿಷ್ಯವನ್ನು ಹೆಚ್ಚು ಆತ್ಮವಿಶ್ವಾಸದಿಂದ ಎದುರಿಸಲು ಅಗತ್ಯವಾದ ಕೌಶಲಗಳ ತರಬೇತಿ ನೀಡಲಾಗುತ್ತಿದೆ.
Related Articles
Advertisement
ಈ ಶೈಕ್ಷಣಿಕ ವರ್ಷದಲ್ಲಿ ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ, ಗ್ರಾಫಿಕ್ ಡಿಸೈನಿಂಗ್, ಡಿಜಿಟಲ್ ಮಾರ್ಕೇಟಿಂಗ್, ಡೇಟಾಆನಾಲಿಟಿಕ್ಸ್, ಸೈಬರ್ ಸೆಕ್ಯುರಿಟಿ, ಆಹಾರ ಸಂಸ್ಕರಣೆ, ಟೈಲರಿಂಗ್, ಓದುವ ಹಾಗೂ ಬರೆಯುವ ಕೌಶಲ ಮತ್ತು ಸಾಮಾನ್ಯ ಕಸೂತಿ, ರಂಗ ನಟನೆ, ಸುಗಮ ಸಂಗೀತ, ಕರಾಟೆ, ಆಂತರಿಕ ವಿನ್ಯಾಸ, ಇತ್ಯಾದಿ ವಿಷಯಗಳಲ್ಲಿ ತರಬೇತಿ ನೀಡಲು ತಯಾರಿ ನಡೆಸಲಾಗಿದೆ. ಈ ಕಾಲೇಜಿನಲ್ಲಿ ಪದವಿ ಶಿಕ್ಷಣದೊಂದಿಗೆ ಅವುಗಳಿಗೆ ಪೂರಕವಾಗಿ ಅಗತ್ಯ ಕೌಶಲಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಕಾಲೇಜು ಆಡಳಿತ ವರ್ಗ ಸಂಕಲ್ಪ ಮಾಡಿದೆ. ಇವುಗಳ ಸಂಪೂರ್ಣ ಪ್ರಯೋಜನವನ್ನು ವಿದ್ಯಾರ್ಥಿಗಳು
ಪಡೆದುಕೊಳ್ಳುವಂತೆ ಈಗಾಗಲೇ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗಿದೆ. ಸ್ಥಾಪಕ ದಿನಾಚರಣೆ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಟಿ. ಸತೀಶ್ ಯು. ಪೈ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಮಮತಾ ದೇವಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಕಾರ್ಯದರ್ಶಿ ಬಿ.ಪಿ. ವರದರಾಯ ಪೈ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ, ಎಂ.ಜಿ.ಎಂ. ಪ.ಪೂ.ಕಾಲೇಜಿನ ಪ್ರಾಂಶುಪಾಲೆ
ಮಾಲತಿದೇವಿ, ಟಿ. ಮೋಹನದಾಸ ಪೈ ಕೌಶಲ ಕೇಂದ್ರದ ನಿರ್ದೇಶಕ ಟಿ. ರಂಗ ಪೈ ಉಪಸ್ಥಿತಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು
ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಮುಖವಾಣಿ, “ದ ಹೊರಿಝೋನ್’ (ದ್ವಿತೀಯ ಸಂಚಿಕೆ) ಅನಾವರಣಗೊಳ್ಳಲಿದೆ. 77 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು 5.5 ಲ.ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲು ಸಂಸ್ಥೆಯ ಅಧ್ಯಕ್ಷರು ವ್ಯವಸ್ಥೆ ಮಾಡಿದ್ದಾರೆ ಎಂದು ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ದೇವಿದಾಸ ಎಸ್.ನಾಯ್ಕ ತಿಳಿಸಿದ್ದಾರೆ.