Advertisement

ಉಡುಪಿ ಎಂಜಿಎಂ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿ: ಉದ್ಘಾಟನೆ

07:05 AM Aug 17, 2017 | |

ಉಡುಪಿ: ಬದುಕಿಗೆ  ಶಿಕ್ಷಣ ಅವಶ್ಯ. ಈ ನೆಲೆಯಲ್ಲಿ ವಿದ್ಯಾರ್ಥಿ ದಿಸೆಯಲ್ಲಿಯೇ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ದಕ್ಕಿದ ಅಧಿಕಾರವನ್ನು ಮೈಗೆ ಅಂಟಿಸಿಕೊಳ್ಳದೇ, ರಚನಾತ್ಮಕ ರೀತಿಯಲ್ಲಿ ಅವರವರ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಅತಿಯಾದ ಅಧಿಕಾರದಾಹ ಭೃಷ್ಟಾಚಾರಕ್ಕೆ ಎಡೆ ಮಾಡಿಕೊಡುತ್ತದೆ ಎಂದು ಮಣಿಪಾಲ ವಿಶ್ವವಿದ್ಯಾಲಯದ ಜಿಯೋ ಪೊಲಿಟಿಕ್ಸ್‌ ಮತ್ತು ಅಂತಾರಾಷ್ಟ್ರೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ನಂದ ಕಿಶೋರ್‌ ಅವರು ಅಭಿಪ್ರಾಯಪಟ್ಟರು. 

Advertisement

ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ನಡೆದ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿ ಅಧಿಕಾರಿ ಡಾ| ಸುರೇಶ್‌ ರಮಣ ಮಯ್ಯ ಪ್ರತಿಜ್ಞಾವಿಧಿ ಬೋಧಿಸಿದರು. 

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲೆ ಪ್ರೊ| ಕುಸುಮಾ ಕಾಮತ್‌ ಅವರು ಮಾತನಾಡಿ, ಇಂತಹ ವೇದಿಕೆಗಳು ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಬೆಳೆಸುವಲ್ಲಿ ಪೂರಕವಾದ ಜವಾಬ್ದಾರಿಯನ್ನು ನಿರ್ವಹಿಸುತ್ತದೆ ಎಂದರು. 

ವಿದ್ಯಾರ್ಥಿ ಮುಖಂಡ ಶ್ರೀಕರ ಪೈ ಸ್ವಾಗತಿಸಿ, ವಿದ್ಯಾರ್ಥಿನಿ ಶಾಂತಿ ರಾವ್‌ ಅತಿಥಿಗಳನ್ನು ಪರಿಚಯಿಸಿದರು. ಎಡ್ರಿನ್‌ ಕಾರ್ಯಕ್ರಮ ನಿರ್ವಹಿಸಿ, ಕಾರ್ಯದರ್ಶಿ ಅಲ್ವಿಟಾ ಸಂಜನಾ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next