Advertisement

Udupi; ಕಡಲ್ಕೊರೆತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ‌ ಹೆಬ್ಬಾಳ್ಕರ್ ಭೇಟಿ

11:39 AM Jul 21, 2024 | Team Udayavani |

ಉಡುಪಿ: ಜಿಲ್ಲೆಯಲ್ಲಿ ಕಡಲ್ಕೊರೆತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ‌ ಹೆಬ್ಬಾಳ್ಕರ್ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಲಕ್ಷ್ಮೀ ಹೆಬ್ಬಾಳಕರ್ ಅವರು, ಉಡುಪಿಯ ಪಡುತೋನ್ಸೆ, ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು (ಹೂಡೆ) ಗ್ರಾಮಕ್ಕೆ ಭೇಟಿ ನೀಡಿ, ಕಡಲ ಕೊರತದಿಂದ ಹಾನಿಗೊಳಗಾದ ಪ್ರದೇಶವನ್ನು ವೀಕ್ಷಣೆ ಮಾಡಿದರು. ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್. ಆರ್. ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next