Advertisement

Udupi: ಪ್ರಸಿದ್ಧ ಬಟ್ಟೆ ಮಳಿಗೆಯಲ್ಲಿ ಮಿಸ್‌ ಫೈರಿಂಗ್‌; ಓರ್ವ ಸಿಬ್ಬಂದಿಗೆ ಗಾಯ

03:15 PM Dec 30, 2023 | Team Udayavani |

ಉಡುಪಿ: ನಗರದ ಪ್ರಸಿದ್ದ ಬಟ್ಟೆ ಮಳಿಗೆಯೊಂದರಲ್ಲಿ ಶವಿವಾರ ಮಧ್ಯಾಹ್ನ ಮಿಸ್‌ ಫೈರಿಂಗ್‌ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡ ಘಟನೆ ನಡೆದಿದೆ.

Advertisement

ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್‌ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್‌ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್‌ ವಶಕ್ಕೆ ಪಡೆದುಕೊಂಡಿದ್ದಾರೆ. ಗನ್‌ ಯಾರದ್ದು, ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next