Advertisement

ಉಡುಪಿ ನಗರಸಭೆ; ಸುಮಿತ್ರಾ ನಾಯಕ್‌ ಅಧ್ಯಕ್ಷೆ , ಲಕ್ಷ್ಮೀ ಉಪಾಧ್ಯಕ್ಷೆಯಾಗಿ ಆಯ್ಕೆ

01:02 AM Oct 30, 2020 | mahesh |

ಉಡುಪಿ: ಉಡುಪಿ ನಗರಸಭೆ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಪರ್ಕಳ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಸುಮಿತ್ರಾ ನಾಯಕ್‌ ಅಧ್ಯಕ್ಷೆ ಮತ್ತು ಕೊಳ ವಾರ್ಡ್‌ನ ಲಕ್ಷ್ಮೀ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

Advertisement

ನಗರಸಭೆಯ ಒಟ್ಟು 35 ವಾರ್ಡ್‌ಗಳಲ್ಲಿ 31 ಸ್ಥಾನಗಳನ್ನು ಬಿಜೆಪಿ, ಕಾಂಗ್ರೆಸ್‌ 4 ಸ್ಥಾನಗಳನ್ನು ಹೊಂದಿದೆ. ಹೀಗಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಪೂರ್ವ ಮತ್ತು ಪಶ್ಚಿಮ ವಾರ್ಡ್‌ನ ಬಿಜೆಪಿ ಸದಸ್ಯರು ಅವಿರೋಧವಾಗಿ ಆಯ್ಕೆಯಾದರು. ಮೀಸಲಾತಿ ಪಟ್ಟಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ (ಎ) ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ನಿಗದಿಯಾ ಗಿತ್ತು. ಈಗಾಗಲೇ ಇರುವ ಸಮಸ್ಯೆಗಳನ್ನು ಬಗೆಹರಿಸಿ ಕೆಲಸಕ್ಕೆ ಆದ್ಯತೆ ಕೊಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸುಮಿತ್ರಾ ನಾಯಕ್‌ ಘೋಷಿಸಿದರು.

ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣ ಪ್ರಕ್ರಿಯೆಯನ್ನು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ರಾಜು ಅವರು ನಡೆಸಿಕೊಟ್ಟರು. ಶಾಸಕ ಕೆ.ರಘುಪತಿ ಭಟ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್‌ ರತ್ನಾಕರ್‌ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಮೀನು ಮಾರಾಟ ಫೇಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಪೌರಾಯುಕ್ತ ಆನಂದ ಸಿ. ಕಲ್ಲೊಳಿಕರ್‌, ಕಂದಯಾಧಿಕಾರಿ ಧನಂಜಯ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next