ವಿಜಯಪುರ: ಮಣಿಪುರದ ಮಹಿಳೆಯರ ಬೆತ್ತಲು ಮೆರವಣಿಗೆ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನೇ ನೇರ ಕಾರಣನಾಗಿದ್ದಾನೆ. ಇದನ್ನು ಮರೆ ಮಾಚಲು ಬಿಜೆಪಿ ಸುಳ್ಳುಗಾರ ಸಾಮಾಜಿಕ ಜಾಲತಾಣದಲ್ಲಿ ಉಡುಪಿ ಕಾಲೇಜಿನ ವಿದ್ಯಾರ್ಥಿನಿಯರ ವಿಡಿಯೋ ಘಟನೆಯನ್ನು ಹುಟ್ಟುಹಾಕಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಸ್. ಎಂ. ಪಾಟೀಲ ಗಣಿಹಾರ ಟೀಕಿಸಿದರು.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ, ಸಂಘ ಪರಿವಾರದ ಸಾಮಾಜಿಕ ಜಾಲತಾಣದ ಸುಳ್ಳನ್ನೇ ನಂಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಮತ್ತೊಂದೆಡೆ ಗೌರವಾನ್ವಿತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರ ಮರ್ಯಾದೆ ಕಳೆಯುವ ಕೆಲಸ ನಡೆದಿದೆ ಎಂದು ಟೀಕಾ ಪ್ರಹಾರ ನಡೆಸಿದರು.
ಇದನ್ನೂ ಓದಿ:ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್; ರಾಜ್ಯಾಧ್ಯಕ್ಷ ಸ್ಥಾನ ಬಹುತೇಕ ಫಿಕ್ಸ್
ತಪ್ಪಿತಸ್ಥ ಯಾರೇ ಇದ್ದರೂ ಶಿಕ್ಷೆಯಾಗಲಿ. ಆದರೆ ರಾಜ್ಯದಲ್ಲಿ ಹಲವು ಪ್ರಕರಣಗಳಲ್ಲಿ ಅಮಾಯಕರನ್ನು ಜೈಲಿನಲ್ಲಿ ಇಡಲಾಗಿದೆ. ಹೀಗಾಗಿ ಶಾಸಕ ತನ್ವೀರ ಶೇಟ್ ಅವರು ಗೃಹ ಸಚಿವ ಪರಮೇಶ್ವರ ಅವರಿಗೆ ಪತ್ರ ಬರೆದಿರುವುದರಲ್ಲಿ ತಪ್ಪೇನಿದೆ ಎಂದು ಆಗ್ರಹಿಸಿದರು.
ಅಹಿಂದ ಮುಖಂಡ ನಾಗರಾಜ ಲಂಬು ಉಪಸ್ಥಿತರಿದ್ದರು.