Advertisement
ಮೂರು ವರ್ಷಗಳ ಹಿಂದೆಯೇ ಮಣಿಪಾಲದ ಟೈಗರ್ ವೃತ್ತದಲ್ಲಿ ಪ್ರಯೋಗಾತ್ಮಕವಾಗಿ ಆರಂಭಿಸಿದ್ದರೂ ಅನಂತರ ಯಾವುದೇ ಪ್ರಗತಿ ಕಂಡಿಲ್ಲ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ರೂಪುಗೊಂಡ ಈ ಯೋಜನೆ ಹಲವು ತಾಂತ್ರಿಕ ಕಾರಣದಿಂದ ಆರಂಭವೇ ಕಂಡಿಲ್ಲ.
Related Articles
Advertisement
ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಮಾರ್ಟ್ ಸಿಗ್ನಲ್ ಯೋಜನೆ ಅನುಷ್ಠಾನದ ಬೇಡಿಕೆಯ ಜತೆಗೆ ಸಾರ್ವಜನಿಕ ವಿರೋಧವು ಇತ್ತು. ಮಣಿಪಾಲ ಪ್ರಾಯೋಗಿಕ ಯೋಜನೆಯಲ್ಲಿ ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಲ್ಲುವ ಅವಧಿ ಹೆಚ್ಚಿರುವ ಬಗ್ಗೆ ಸಾರ್ವಜನಿಕರು ಅಸಮಾಧಾನವು ವ್ಯಕ್ತಪಡಿಸಿದ್ದರು. ಅಲ್ಲದೆ ಇಡೀ ಸಿಗ್ನಲ್ ಕಂಬ ಜಾಹೀರಾತು ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡುವಂತಿದೆ ಎಂಬ ಆಕ್ಷೇಪ ಕೇಳಿ ಬಂದಿತ್ತು. ನಗರಸಭೆಗೆ ಹೊಸ ಚುನಾಯಿತ ಮಂಡಳಿ ಅಸ್ತಿತ್ವಕ್ಕೆ ಬಂದಿದ್ದು, ಕೆಲವು ಸುಧಾರಣೆಗಳೊಂದಿಗೆ ಟ್ರಾಫಿಕ್ ಸಿಗ್ನಲ್ ಯೋಜನೆಯನ್ನು ವ್ಯವಸ್ಥಿತವಾಗಿ ವಿಳಂಬವಿಲ್ಲದಂತೆ ಜಾರಿಗೊಳಿಸಬೇಕು ಎಂದು ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ. ಜನರ ಬೇಡಿಕೆಯಂತೆ ವ್ಯವಸ್ಥಿತವಾಗಿ ಅನುಷ್ಠಾನ
ಟ್ರಾಫಿಕ್ ಸಿಗ್ನಲ್ ಅಳವಡಿಕೆ ಯೋಜನೆ ಸಂಬಂಧಿಸಿ ಕುಲಂಕಷವಾಗಿ ಪರಿಶೀಲನೆ ನಡೆಸಲಾಗುವುದು. ಯೋಜನೆಗೆ ಸಂಬಂಧಿಸಿ ಸಾರ್ವಜನಿಕರ ಬೇಡಿಕೆಯಂತೆ ಸುಧಾರಣೆ ಕ್ರಮಗಳನ್ನು ಕೈಗೊಂಡು ವಿಳಂಬವಾಗದಂತೆ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲಾಗುತ್ತದೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ನಗರದಲ್ಲಿ ಸಂಚಾರ ದಟ್ಟಣೆ ಮತ್ತು ಟ್ರಾಫಿಕ್ ಜಾಮ್, ಅನಧೀಕೃತ ಪಾರ್ಕಿಂಗ್ ಸಂಬಂಧಿಸಿ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು.
– ಪ್ರಭಾಕರ ಪೂಜಾರಿ, ಅಧ್ಯಕ್ಷರು, ಉಡುಪಿ ನಗರಸಭೆ ಕಲ್ಸಂಕ ಜಂಕ್ಷನ್‌ನಲ್ಲಿ ನಿತ್ಯ ಟ್ರಾಫಿಕ್
ಕಲ್ಸಂಕ ವೃತ್ತದಲ್ಲಿ ನಿತ್ಯ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಪೊಲೀಸರ ಸಿಗ್ನಲ್‌ಗೂ ಲೆಕ್ಕಿಸದೇ ವಾಹನಗಳನ್ನು ಎಲ್ಲೆಂದರಲ್ಲಿ ನುಗ್ಗಿಸುವುದು ಕಂಡು ಬರುತ್ತಿದೆ. ಇದರಿಂದಾಗಿ ಸಣ್ಣಪುಟ್ಟ ಅಪಘಾತಗಳು ಆಗಾಗ ಸಂಭವಿಸುತ್ತಿದೆ. ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಪ್ರವಾಸಿ ವಾಹನಗಳ ಚಾಲಕರು ನಿಯಮ ಉಲ್ಲಂ ಸುತ್ತಿರುವುದು ಕಂಡು ಬರುತ್ತಿದೆ. ವಾರಾಂತ್ಯದಲ್ಲಿ ಇಲ್ಲಿ ಟ್ರಾಫಿಕ್ ನಿರ್ವಹಣೆಯೇ ದೊಡ್ಡ ಸವಾಲಾಗಿದೆ. ಹೆಚ್ಚುವರಿ ಪೊಲೀಸ್ ಹಾಗೂ ಹೋಂ ಗಾರ್ಡ್ ಸಿಬಂದಿ ನಿಯೋಜನೆಯಾದರೂ ಸಮಸ್ಯೆ ಹಾಗೆ ಇರುತ್ತದೆ. ಹೀಗಾಗಿ ಸ್ಮಾರ್ಟ್ ಸಿಗ್ನಲ್ ಹಾಕಿದರ ಪೊಲೀಸರ ಒತ್ತಡ ಅರ್ಧದಷ್ಟು ಕಡಿಮೆಯಾಗುವ ಜತೆಗೆ ಟ್ರಾಫ್ರಿಕ್ ಸಮಸ್ಯೆಗೂ ಸ್ವಯಂ ನಿಯಂತ್ರಣಕ್ಕೆ ಬರಲಿದೆ ಎಂಬುದು ಸ್ಥಳೀಯರ ವಾದ.