Advertisement

ಕಟಪಾಡಿ: ರಾಷ್ಟ್ರಮಟ್ಟದ ಕ್ರಿಕೆಟ್‌ ಕೂಟಕ್ಕೆ ಚಾಲನೆ

03:45 AM Feb 12, 2017 | Team Udayavani |

ಕಾಪು: ಸರಕಾರದ ಮೂಲಕ ವಿವಿಧ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಉತ್ತೇಜನ ನೀಡಲಾಗುತ್ತಿದ್ದು, ಇದಕ್ಕೆ ಪೂರಕವಾಗಿ ಗ್ರಾಮೀಣ ಭಾಗದ ಕ್ರೀಡಾಂಗಣಗಳ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕಟಪಾಡಿ ನೆಹರೂ ಮೈದಾನದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಕಾಪು ಶಾಸಕ ವಿನಯ ಕುಮಾರ್‌ ಸೊರಕೆ ಹೇಳಿದರು.

Advertisement

ಕಟಪಾಡಿ ಪಳ್ಳಿಗುಡ್ಡೆ ನೆಹರೂ ಮೈದಾನದಲ್ಲಿ ಫ್ರೆಂಡ್ಸ್‌ ಕಟಪಾಡಿಯ ಆಶ್ರಯದಲ್ಲಿ ನಡೆಯಲಿರುವ 3ನೇ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್‌ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋಟೆ ಗ್ರಾ. ಪಂ. ಅಧ್ಯಕ್ಷೆ ಕೃತಿಕಾ ರಾವ್‌ ಅಧ್ಯಕ್ಷತೆ ವಹಿಸಿದ್ದರು. ಕ್ರಿಕೆಟ್‌ ಕೋಚ್‌ ಉದಯಕುಮಾರ್‌ ವೈ. ಮತ್ತು ಕಾಪು / ಪಡುಬಿದ್ರಿ ವಲಯದ ಸಮಾಜಮುಖೀ ಪತ್ರಕರ್ತರನ್ನು ಸಮ್ಮಾನಿಸಿ, ಗೌರವಿಸಲಾಯಿತು.

ದ. ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಎ. ಸುವರ್ಣ, ಉದ್ಯಮಿ ಕೆ. ಸತ್ಯೇಂದ್ರ ಪೈ, ಉಡುಪಿ ಜಿ. ಪಂ. ಸದಸ್ಯೆ ಗೀತಾಂಜಲಿ ಸುವರ್ಣ, ಜಿ. ಪಂ. ಮಾಜಿ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ, ಕೋಟೆ ಗ್ರಾ. ಪಂ. ಉಪಾಧ್ಯಕ್ಷ ಗಣೇಶ್‌ ಕುಮಾರ್‌ ಮಟ್ಟು, ಕೆಆರ್‌ಎಸ್‌ ಕ್ರಿಕೆಟ್‌ ಅಕಾಡೆಮಿಯ ಸಿಇಒ ಶುಕೂರ್‌ ಸಾಹೇಬ್‌, ಕರ್ನಾಟಕ ರಾಜ್ಯ ಮೀನುಗಾರಿಕಾ ನಿಗಮದ ನಿರ್ದೇಶಕ ದೀಪಕ್‌ ಕುಮಾರ್‌ ಎರ್ಮಾಳ್‌, ಮಾಜಿ ಗ್ರಾ. ಪಂ. ಅಧ್ಯಕ್ಷರಾದ ಪ್ರೇಮ್‌ ಕುಮಾರ್‌, ಪ್ರಶಾಂತ್‌ ಜತ್ತನ್ನ, ವಿನಯ ಬಲ್ಲಾಳ್‌, ಗ್ರಾ. ಪಂ. ಸದಸ್ಯರಾದ ಸುಶೀಲ್‌ ಬೋಳಾರ್‌, ರತ್ನಾಕರ ಕೋಟ್ಯಾನ್‌ ಉಪಸ್ಥಿತರಿದ್ದರು.

ಫ್ರೆಂಡ್ಸ್‌ ಕಟಪಾಡಿ ಅಧ್ಯಕ್ಷ ಅಶೀದುಲ್ಲಾ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಅಪ್ಪು ಮಾಸ್ತರ್‌ ಕಾರ್ಯ ಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸೃಜನ್‌ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next