Advertisement
“ಇದು ಪೂರ್ವ ಯೋಜಿತ ಕೊಲೆಯಾಗಿದ್ದು ಆರೋಪಿ ತನ್ನ ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಹತ್ಯೆಗೀಡಾಗಿರುವ ಅಯ್ನಾಝ್ ಳನ್ನು ಹತ್ಯೆ ಮಾಡುವುದು ಉದ್ದೇಶವಾಗಿತ್ತು ಎಂದು ಹೇಳಿದ್ದಾನೆ. ಕೃತ್ಯ ಎಸಗುವ ವೇಳೆ ಇತರರು ತಡೆಯಲು ಪ್ರಯತ್ನಿಸಿದ್ದರಿಂದ ಹತ್ಯೆ ಮಾಡಲಾಗಿದೆ, ಸಾಕ್ಷ್ಯ ನಾಶ ಮಾಡುವ ಉದ್ದೇಶವೂ ಹತ್ಯೆಗಳ ಹಿಂದಿದೆ ಎಂದು ಹೇಳಿದರು. ಅವರ ಹೇಳಿಕೆಗಳ ಸತ್ಯಾಸತ್ಯತೆಯ ಬಗ್ಗೆ ನಾವು ಇನ್ನಷ್ಟು ತನಿಖೆ ನಡೆಸುತ್ತಿದ್ದೇವೆ ಎಂದು ಎಸ್ಪಿ ತಿಳಿಸಿದ್ದಾರೆ.
Related Articles
Advertisement
ಚೌಗಲೆ ಯನ್ನು ಉಡುಪಿ ಪೊಲೀಸರು ಬೆಳಗಾವಿಯಿಂದ ವಶಕ್ಕೆ ಪಡೆದು ಉಡುಪಿಗೆ ಕರೆತಂದಿದ್ದರು. ಉಡುಪಿ ಮತ್ತು ಬೆಳಗಾವಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡುಚಿಯಲ್ಲಿ ಬಂಧಿಸಲಾಗಿತ್ತು.
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಣ್ಣು ನೇಜಾರಿನ ಹಂಪನಕಟ್ಟೆ ಸಮೀಪದ ತೃಪ್ತಿ ಲೇ ಔಟ್‌ನ ಮನೆಯ ತಾಯಿ ಮತ್ತು ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈಯಲಾಗಿತ್ತು.
ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿರುವ ನೂರ್ ಮೊಹಮ್ಮದ್ ಅವರ ಪತ್ನಿ ಹಸೀನಾ (48), ಪುತ್ರಿಯರಾದ ಅಫ್ನಾನ್ (23), ಅಯ್ನಾಝ್ (21), ಪುತ್ರ ಅಸೀಮ್ (14) ಹತ್ಯೆಗೀಡಾಗಿದ್ದರು.
ನೂರ್ ಮೊಹಮ್ಮದ್ ಅವರ ತಾಯಿ ಹಾಜಿರಾಬಿ (70) ಮೇಲೆಯೂ ದಾಳಿ ನಡೆಸಲಾಗಿತ್ತು.