Advertisement

Udupi; ನೇಜಾರು ಪ್ರಕರಣ: ಚೌಗುಲೆ ಪೆರೋಲ್‌ ಅರ್ಜಿ ತಿರಸ್ಕಾರ

11:53 PM Feb 09, 2024 | Team Udayavani |

ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್‌ ಚೌಗುಲೆ ಸಲ್ಲಿಸಿರುವ ಪೆರೋಲ್‌ ಅರ್ಜಿಯನ್ನು ಉಡುಪಿಯ ಪ್ರಧಾನ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ ತಿರಸ್ಕರಿಸಿ ಶುಕ್ರವಾರ ಆದೇಶಿಸಿದ್ದಾರೆ.

Advertisement

ಫೆ. 1ರಂದು ನಿಧನ ಹೊಂದಿದ ಆರೋಪಿಯ ಸಹೋದರ ನಿತಿನ್‌ ಅವರ ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಮೂರು ತಾಸು ಭಾಗವಹಿಸಲು ತನ್ನ ಊರಾದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಗೆ ತೆರಳಲು ಪೆರೋಲ್‌ ಮಂಜೂರು ಮಾಡುವಂತೆ ನ್ಯಾಯಾಲಯಕ್ಕೆ ಫೆ. 8ರಂದು ಅರ್ಜಿ ಸಲ್ಲಿಸಲಾಗಿತ್ತು.

ಆದರೆ ಇದಕ್ಕೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್‌.ಎಂ. ನದಾಫ್ ಆಕ್ಷೇಪಣೆ ಸಲ್ಲಿಸಿದ್ದು, ಆರೋಪಿಗೆ ಪೆರೋಲ್‌ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗುತ್ತದೆ. ಅಲ್ಲದೆ ಆರೋಪಿಯ ಮೇಲೆ ದಾಳಿಯಾಗುವ ಸಾಧ್ಯತೆ ಇರುತ್ತದೆ. ಅದೇ ರೀತಿ ಆರೋಪಿ ತನ್ನ ಸಹೋದರ ಮೃತಪಟ್ಟ ಬಗ್ಗೆ ಯಾವುದೇ ಮರಣ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸದಿರುವುದರಿಂದ ಆತನಿಗೆ ಪೆರೋಲ್‌ ನೀಡಬಾರದು ಎಂದು ವಾದ ಮಂಡಿಸಿದರು.

ಪ್ರಕರಣದ ದೋಷಾರೋಪಣ ಪಟ್ಟಿ ಸಿದ್ಧಗೊಂಡಿದ್ದು, ಫೆ. 12ರಂದು ಪೊಲೀಸರು ನ್ಯಾಯಾಲಯಕ್ಕೆ ಅದನ್ನು ಸಲ್ಲಿಸುವ ಸಾಧ್ಯತೆಗಳಿವೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next