Advertisement

ಬೆಳಪು :  ಆಕ್ಸಿಜನ್ ಘಟಕಕ್ಕೆ ಸಚಿವ ಜಗದೀಶ್ ಶೆಟ್ಟರ್ ಭೇಟಿ, ಪರಿಶೀಲನೆ

04:43 PM Jul 05, 2021 | Team Udayavani |

ಕಾಪು  : ಬೃಹತ್ ಮತ್ತು ಮದ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಸಚಿವ ಜಗದೀಶ್ ಶೆಟ್ಟರ್ ಉಡುಪಿ ಜಿಲ್ಲೆಯ ಬೆಳಪು ಕೈಗಾರಿಕಾ ಪ್ರದೇಶದಲ್ಲಿ ತೆರೆಯಲ್ಪಟ್ಟ ಆಕ್ಸಿಜನ್ ಘಟಕಕ್ಕೆ ಭೇಟಿ ನೀಡಿ, ಕೈಗಾರಿಕಾ ಪ್ರದೇಶದ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

Advertisement

ಕೋವಿಡ್ ಸಂಕಷ್ಟದ ಅವಧಿಯಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಂಡು ಕೊರೊನಾ ಎರಡನೇ ಅಲೆಯನ್ನು ನಿರ್ವಹಣೆ ಮಾಡಿ, ಸಂಪೂರ್ಣವಾಗಿ ನಿಯಂತ್ರಿಸುವಲ್ಲಿ ಸರಕಾರ ಸಫಲವಾಗಿದೆ ಎಂದರು.

ಕರಾವಳಿ ಜಿಲ್ಲೆಗಳಲ್ಲಿ ಕೈಗಾರಿಕೆಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಕೆಐಎಡಿಬಿ ಮೂಲಕ ಕೈಗಾರಿಕೆ ಮತ್ತು ಕೈಗಾರಿಕೋದ್ಯಮಿಗಳಿಗೆ ಸಂಪೂರ್ಣ ಸಹಕಾರ, ಪ್ರೋತ್ಸಾಹ ನೀಡಲಾಗುವುದು ಎಂದರು.

ಇದನ್ನೂ ಓದಿ : ‘ಮನಾಲಿ’ಯಲ್ಲಿ ತುಂಬಿ ತುಳುಕಿದ ಪ್ರವಾಸಿಗರು :ಇದು 3 ನೇ ಅಲೆಗೆ ಆಹ್ವಾನ ಎಂದ ನೆಟ್ಟಿಗರು  

ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ1,500 ಎಕ್ರೆ ಜಮೀನು ಸ್ವಾಧೀನಕ್ಕೆ ಬೇಡಿಕೆ ಬಂದಿದೆ. ಅದನ್ನು ಶೀಘ್ರವಾಗಿ ಈಡೇರಿಸಲು ಸರಕಾರದ ವತಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದರು.

Advertisement

ಕೈಗಾರಿಕೋದ್ಯಮಗಳಿಗೆ ಕೈಗಾರಿಕೆಗಳನ್ನು ನಿರ್ಮಿಸಲು ಅಗತ್ಯ ಇರುವ ಪರವಾನಿಗೆಯನ್ನು ಸುಲಲಿತವಾಗಿ ದೊರಕಿಸಿಕೊಡಲು ವ್ಯವಸ್ಥೆ ಮಾಡಲಾಗುವುದು‌. ಆ ಮೂಲಕ ಮತ್ತಷ್ಟು ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ ಸ್ಟಾಟ್ ಅಪ್ ದೊರಕಿಸಿಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆ,ವಿದ್ಯುತ್ ಸಬ್ ಸ್ಟೇಷನ್‌ ಮತ್ತು ಹೆಚ್ಚುವರಿ ನೀರಾವರಿ ಸೌಲಭ್ಯವನ್ನು ಒದಗಿಸುವಂತೆ ಕೈಗಾರಿಕಾ ಉದ್ಯಮಿಗಳು ಸಚಿವರಲ್ಲಿ ಮನವಿ ಮಾಡಿದರು.

ಪಡುಬಿದ್ರಿ ಗ್ರಾ.ಪಂ. ಗೆ ಎಸ್ಎಲ್ಆರ್ಎಮ್ ಘಟಕ ಮತ್ತು ವಸತಿ ಯೋಜನೆಗಳಿಗೆ ಅಗತ್ಯ ಇರುವ ಜಮೀನನ್ನು ನೀಡುವಂತೆ ಶಾಸಕ ಲಾಲಾಜಿ ಆರ್. ಮೆಂಡನ್ ಸಚಿವರಿಗೆ ಮನವಿ ಸಲ್ಲಿಸಿದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಶಾಸಕ ರಘುಪತಿ ಭಟ್, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಕೆಐಡಿಬಿ ಅಧಿಕಾರಿಗಳಾದ ಗಣಪತಿ, ಜನಾರ್ದನ ನಾಯಕ್, ಜಗದೀಶ್,ನಾಗರಾಜ್, ಸಣ್ಣ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್,ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೃಷ್ಣರಾಜ್ ಕೊಡಂಚ, ಜಿ.ಪಂ ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯಕ್, ಸುರೇಂದ್ರ ಪಣಿಯೂರು ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ : ಸತ್ಯದ ಮಾರ್ಗದಲ್ಲಿದ್ದವರಿಗೆ ಒಳ್ಳೆಯದಾಗುತ್ತದೆ: ಪಿಎ ಬಂಧನ ವಿಚಾರಕ್ಕೆ ರಾಮುಲು ಪ್ರತಿಕ್ರಿಯೆ

Advertisement

Udayavani is now on Telegram. Click here to join our channel and stay updated with the latest news.

Next