Advertisement
ದಕ್ಷಿಣ ಕನ್ನಡಲ್ಲಿ ಯಥಾಸ್ಥಿತಿದಕ್ಷಿಣ ಕನ್ನಡದಲ್ಲೂ ರಾತ್ರಿ ಕರ್ಫ್ಯೂ ಜಾರಿಯಲ್ಲಿದ್ದು, ಮುಂದಿನ ಆದೇಶದ ತನಕ ಯಥಾಸ್ಥಿತಿಯಲ್ಲಿರುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ದಿನದ ಪ್ರಕರಣ ಮತ್ತಷ್ಟು ಇಳಿಮುಖಗೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಕನಿಷ್ಠ ಪ್ರಕರಣ ಶನಿವಾರ ದಾಖಲಾಗಿದೆ. ಜಿಲ್ಲೆಯಲ್ಲಿ 27 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಯಾವುದೇ ಸಾವಿನ ವರದಿಯಾಗಿಲ್ಲ. 73 ಮಂದಿ ಗುಣಮುಖರಾಗಿದ್ದಾರೆ. ಸದ್ಯ 529 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಗುರುವಾರ ಶೇ. 0.31ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ.
Related Articles
Advertisement
ಉಡುಪಿ ಜಿಲ್ಲೆಯಲ್ಲಿ 21 ಮಂದಿಗೆ ಸೋಂಕುಜಿಲ್ಲೆಯಲ್ಲಿ ಶನಿವಾರ 21 ಮಂದಿಗೆ ಸೋಂಕು ದೃಢಪಟ್ಟಿದೆ. 13 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 84 ಸಕ್ರಿಯ ಪ್ರಕರಣ ಗಳಿವೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟನೆ ತಿಳಿಸಿದೆ. ಕಾಸರಗೋಡು: 185 ಮಂದಿಗೆ ಸೋಂಕು
ಜಿಲ್ಲೆಯಲ್ಲಿ ಶನಿವಾರ 185 ಮಂದಿಗೆ ಸೋಂಕು ದೃಢಪಟ್ಟಿದ್ದು 171 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 1,236 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ. ಕೇರಳದಲ್ಲಿ 9,470 ಮಂದಿಗೆ ಸೋಂಕು
ರಾಜ್ಯದಲ್ಲಿ ಶನಿವಾರ 9,470 ಮಂದಿಗೆ ಸೋಂಕು ದೃಢಪಟ್ಟಿದ್ದು 12,881 ಮಂದಿ ಗುಣಮುಖರಾಗಿದ್ದಾರೆ. 101 ಮಂದಿ ಮೃತಪಟ್ಟಿದ್ದಾರೆ. ಕೊಡಗು: 10 ಮಂದಿಗೆ ಕೊರೊನಾ
ಕೊಡಗು ಜಿಲ್ಲೆಯಲ್ಲಿ ಶನಿವಾರ 10 ಮಂದಿಗೆ ಕೋವಿಡ್ ದೃಢಪಟ್ಟಿದೆ. 8 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸಕ್ತ 296 ಸಕ್ರಿಯ ಪ್ರಕರಣಗಳಿವೆ. ಸಾವಿನ ಪ್ರಕರಣ ದಾಖಲಾಗಿಲ್ಲ. ಪಾಸಿಟಿವಿಟಿ ಪ್ರಮಾಣ ಶೇ. 0.25ರಷ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.