Advertisement

ಉಡುಪಿ : ಆ. 16 ರವರೆಗೆ ನೈಟ್ ಕರ್ಫ್ಯೂ ವಿಸ್ತರಣೆ : ಜಿಲ್ಲಾಧಿಕಾರಿ ಜಿ.ಜಗದೀಶ್  ಆದೇಶ 

10:12 PM Aug 04, 2021 | Team Udayavani |

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನಲೆ ರಾತ್ರಿ ಕರ್ಫ್ಯೂವನ್ನು ವಿಸ್ತರಣೆ ಮಾಡಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.

Advertisement

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್  ನಾಳೆಯಿಂದ ಆ.16 ವರೆಗೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಆದೇಶ  ಹೊರಡಿಸಿದ್ದಾರೆ.

ಅದರಂತೆ ಈ ವೇಳೆ ರೋಗಿಗಳು ಮತ್ತು ಅವರೊಂದಿಗಿರುವ ಪರಿಚಾರಕರು ಅಗತ್ಯತೆಗಾಗಿ ವ್ಯಕ್ತಿಗಳನ್ನು ಸಳಾಂತರಿಸಲು ಅನುಮತಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೈಗಾರಿಕೆಗಳು/ಕಂಪನಿಗಳಿಗೆ, ರಾತ್ರಿ ಸಮಯದಲ್ಲಿ ಕಾರ್ಯಾಚರಿಸಲು ಅನುಮತಿಯನ್ನು ನೀಡಲಾಗಿದೆ. ಹಾಗೂ ಅಂತಹ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರ, ಸಂಸ್ಥೆಯಿಂದ ನೀಡಲಾದ ಸೂಕ್ತ ಗುರುತಿನ ಚೀಟಿ/ಅನುಮತಿಗೆ ಸಂಬಂಧಿಸಿದ ದಾಖಲೆಯನ್ನು ಸಲ್ಲಿಸುವ ಮೂಲಕ ಸಂಚಾರಿಸಬಹುದಾಗಿದೆ.

ವೈದ್ಯಕೀಯ, ತುರ್ತು ಹಾಗೂ ಔಷಧಾಲಯಗಳನ್ನು ಒಳಗೊಂಡ ಅವಶ್ಯಕ ಸೇವೆಗಳು ಯಥಾ ರೀತಿಯಲ್ಲಿ ಸರಕಾರದ ನಿಯಮಗಳೊಂದಿಗೆ ಕಾರ್ಯನಿರ್ವಹಿಬಹುದು. ಹಾಗೂ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಿದೆ. ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಒದಗಿಸುವ ನೌಕರರು ಹಾಗೂ ವಾಹನಗಳನ್ನುತಮ್ಮ ಸಂಸ್ಥೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯನ್ನು ಸಲ್ಲಿಸಿ ಸಂಚಾರಿಸಬಹುದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪೆನಿ ಕಾರ್ಯ ನಿರ್ವಹಿಸುವ ಅಗತ್ಯ ಸಿಬ್ಬಂದಿ ಹಾಗೂಕಾರ್ಮಿಕರನ್ನು ಹೊರತುಪಡಿಸಿ ಇತರ ಸಿಬ್ಬಂದಿ ಹಾಗೂ ಕೆಲಸಗಾರರು ಮನಗಳಲ್ಲಿಯೇ ಕಾರ್ಯನಿರ್ವಹಿಸಲು ಸೂಚಿಸುವುದು.

ವಿಮಾನ ನಿಲ್ದಾಣಕ್ಕೆ ,ರೈಲ್ವೆ ನಿಲ್ದಾಣಕ್ಕೆ, ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, ರೈಲ್ವೆ ನಿಲ್ದಾಣಗಳಿಂದ, ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಲಾಗಿದೆ. ಈ ವೇಳೆ ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು/ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಎಲ್ಲಾ ತರಹದ ಟ್ರಕ್ ಗಳಲ್ಲಿ ಸಾಗಿಸುವ ಸರಕಗಳು, ಸರಕು ವಾಹನ ಅಥವಾ ಇತರ ಸರಕು ಸಾಗಾಟ ವಾಹನಗಳು, ಖಾಲಿ ವಾಹನಗಳನ್ನು ಒಳಗೊಂಡು ಓಡಾಟಕ್ಕೆ ಅವಕಾಶ ನೀಡಲಾಗಿದೆ, ಇ-ಕಾಮರ್ಸ್ ಕಂಪನಿಗಳು ಹಾಗೂ ಹೋಮ್ ಡೆಲಿವರಿ ಕೆಲಸವನ್ನು ಮುಂದುವರೆಸಲು ಅನುಮತಿಸಲಸಲಾಗಿದೆ. ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ

Advertisement
Advertisement

Udayavani is now on Telegram. Click here to join our channel and stay updated with the latest news.

Next