Advertisement

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

01:12 AM Nov 17, 2024 | Team Udayavani |

ಮಣಿಪಾಲ: ಡಾ| ಕೆ. ಕಸ್ತೂರಿ ರಂಗನ್‌ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ಆಧಾರದ ಮೇಲೆ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿ.ಪಂ. ಡಾ| ವಿ.ಎಸ್‌. ಆಚಾರ್ಯ ಸಭಾಂಗಣದಲ್ಲಿ ಪರಸರ ಸೂಕ್ಷ್ಮ ಪ್ರದೇಶ ಮತ್ತು ಕಸ್ತೂರಿ ರಂಗನ್‌ ವರದಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರದ ಅರಣ್ಯ ಕಾಯ್ದೆಗಳು ಅರಣ್ಯ ಇಲಾಖೆಯ ನೀತಿ ನಿಯಮಗಳಿಂದ ನಿರಂತರ ತೊಂದರೆ ಅನುಭವಿಸುತ್ತಿರುವ ಕಾಡಂಚಿನ ನಿವಾಸಿಗಳಿಗೆ ಕಸ್ತೂರಿ ರಂಗನ್‌ ವರದಿ ಜಾರಿಯಾದರೆ ವಿದ್ಯುತ್‌, ರಸ್ತೆ, ಸೇತುವೆ, ಕುಡಿಯುವ ನೀರು, ಜನವಸತಿ ಪ್ರದೇಶ, ವಸತಿ ಪ್ರದೇಶ, ಮನೆಗಳ ನಿರ್ಮಾಣ ಸಹಿತ ಮೂಲಸೌಕರ್ಯಗಳಿಗೆ ಕುತ್ತು ಬಂದು ಭವಿಷ್ಯದಲ್ಲಿ ಜನ ಜೀವನಕ್ಕೆ ಅನಾನುಕೂಲ ಉಂಟಾಗಬಹುದು ಎಂಬ ಆತಂಕ ಹೆಚ್ಚಿದೆ. ಸದ್ಯದ ಪರಿಸ್ಥಿತಿಯಲ್ಲಿ ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಬಗ್ಗೆ ಕಸ್ತೂರಿ ರಂಗನ್‌ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ರಾಜ್ಯ ಸರಕಾರ ತಿರಸ್ಕರಿಸಿದೆ ಎಂದರು.

ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಶಾಸಕರಾದ ಎ.ಕಿರಣ್‌ ಕುಮಾರ್‌ ಕೊಡ್ಗಿ, ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿದರು. ಜಿಪಂ ಸಿಇಒ ಪ್ರತೀಕ್‌ ಬಾಯಲ್‌, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್‌., ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್‌ ಬಾಬು ಎಂ., ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ತಾ.ಪಂ. ಇಒಗಳು, ಅಧಿಸೂಚಿತ ಗ್ರಾ.ಪಂ.ಗಳ ಪಿಡಿಒಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next