Advertisement

ಉಡುಪಿ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಸೂಚನೆ

01:00 AM Mar 21, 2019 | Team Udayavani |

ಉಡುಪಿ: ಚುನಾವಣ ನೀತಿ ಸಂಹಿತೆ ಉಲ್ಲಂಘನೆಯಾದರೆ ಸಾರ್ವಜನಿಕರಿಂದ ದೂರಿಗಾಗಿ ಕಾಯದೆ ಅಧಿಕಾರಿಗಳು/ಸಿಬಂದಿ ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುವ ಮಲ್ಲಿಕಾರ್ಜುನ ಉತ್ತರೆ ಅವರು ಸೂಚನೆ ನೀಡಿದ್ದಾರೆ.

Advertisement

ಬುಧವಾರ ಉಡುಪಿಗೆ ಆಗಮಿಸಿ ಚುನಾವಣಾ ಸಿದ್ಧತೆಗಳ ಪರಿಶೀಲನೆ ನಡೆಸಿದ ಅನಂತರ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು. 

ಮತದಾರರ ಮೇಲೆ ಪ್ರಭಾವ ಬೀರುವ ಚಟುವಟಿಕೆಗಳು ನಡೆಯದಂತೆ ಚುನಾವಣ ಕಾರ್ಯಗಳಿಗೆ ನಿಯೋಜಿತ ತಂಡಗಳು ಗಮನಹರಿಸಬೇಕು ಎಂದು ಅವರು ಸೂಚನೆ ನೀಡಿದರು.

ಕ್ಷೇತ್ರವು ಎರಡು ಜಿಲ್ಲೆಗಳಲ್ಲಿ ಹರಡಿರುವುದರಿಂದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಹಣ ಸಾಗಾಟ ಸೇರಿದಂತೆ ಅಕ್ರಮ ಚಟುವಟಿಕೆಗಳ ಮಾಹಿತಿ ಹಂಚಿಕೊಂಡು ತಡೆಗಟ್ಟಬೇಕು. ದಿನದ 24 ಗಂಟೆಗಳ ಕಾಲವೂ ಲೋಪಕ್ಕೆ ಆಸ್ಪದವಾಗದಂತೆ ನಿಗಾ ಇಡಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ವೆಚ್ಚ ವೀಕ್ಷಕರಿಗೆ ಲೋಕಸಭಾ ಕ್ಷೇತ್ರದ ಮಾಹಿತಿಗಳನ್ನು ನೀಡಿ ಕ್ಷೇತ್ರದ ಎಲ್ಲ 1,837 ಮತಗಟ್ಟೆಗಳಲ್ಲೂ ಮೂಲಸೌಕರ್ಯ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಚುನಾವಣ ತಹಶೀಲ್ದಾರ್‌ ಮುಹಮ್ಮದ್‌ ಇಸಾಕ್‌, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. 

Advertisement

ಭದ್ರತಾ ಸಿದ್ಧತೆ ಪರಿಶೀಲನೆ
ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಬುಧವಾರ ಡಿಸಿ ಕಚೇರಿಯಿಂದ 100 ಮೀ. ವ್ಯಾಪ್ತಿಯೊಳಗಿನ ಪ್ರದೇಶಗಳಿಗೆ ಭೇಟಿ ನೀಡಿ ಭದ್ರತೆ ಹಾಗೂ ಇತರ ಸಿದ್ಧತೆಗಳನ್ನು ಪರಿಶೀಲಿಸಿದರು. ಎಸ್‌ಪಿ ನಿಶಾ ಜೇಮ್ಸ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next