Advertisement

ಪರ್ಯಾಯ ಪುರಪ್ರವೇಶದ ಆಮಂತ್ರಣ ಪತ್ರಿಕೆ ಮುಖ್ಯಮಂತ್ರಿಯವರಿಂದ ಅನಾವರಣ

04:48 PM Dec 13, 2019 | keerthan |

ಉಡುಪಿ:  ಮುಂದಿನ ತಿಂಗಳು ಉಡುಪಿಯಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಶುಕ್ರವಾರ ಬಿಡುಗಡೆಗೊಳಿಸಿದರು.

Advertisement

ಉಡುಪಿಯ ಶಾಸಕರಾದ ಕೆ ರಘುಪತಿ ಭಟ್ ಇವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ತಂಡ ಆಮಂತ್ರಣ ಪತ್ರಿಕೆಯನ್ನು ಅನಾವರಣಗೊಳಿಸಿತು.

ಗೃಹ ಸಚಿವರು ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಶ್ರೀ ದಿನಕರ ಬಾಬು, ಮೀನುಗಾರ ಮುಖಂಡ ಯಶ್ಪಾಲ್ ಸುವರ್ಣ ಹಾಗೂ ಪರ್ಯಾಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next