ಉಡುಪಿ: ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯಲ್ಲಿ ಜೂ.16ರಂದು ಒಂದು ದಿನದ ಮಟ್ಟಿಗೆ ಪುಸ್ತಕದ ಅಂಗಡಿಗಳು ಮತ್ತು ಮೊಬೈಲ್ ಅಂಗಡಿಗಳನ್ನು ತೆರೆಯಲು ಜಿಲ್ಲಾಡಳಿತ ಅನುಮತಿ ನೀಡಿದೆ.
ಈ ಜಿಲ್ಲಾಧಿಕಾರಿಯವರು ಪ್ರಕಟಣೆ ಹೊರಡಿಸಿದ್ದು, ಆನ್ ಲೈನ್ ತರಗತಿಗಳು ನಡೆಯುವ ಕಾರಣ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ. ಜೂ.16ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬುಕ್ ಸ್ಟಾಲ್/ ಸ್ಟೇಷನರಿ ಮತ್ತು ಮೊಬೈಲ್ ಅಂಗಡಿಗಳನ್ನು ತೆರೆಯಬಹುದು ಎಂದು ಸೂಚಿಸಲಾಗಿದೆ.
ಇದನ್ನೂ ಓದಿ:ಖ್ಯಾತ ಜ್ಯೋತಿಷ್ಯ ತಜ್ಞ, ಉದಯವಾಣಿ ಅಂಕಣಕಾರ ಎನ್.ಎಸ್ ಭಟ್ ಇನ್ನಿಲ್ಲ
ಜಿಲ್ಲೆಯಲ್ಲಿ ಸರ್ಕಾರದ ಸೂಚನೆಯಂತೆ ಜೂ.14 ( ಸೋಮವಾರ) ರಿಂದ ಆಹಾರ, ಹಾಲು ಮುಂತಾದ ಅಗತ್ಯ ವಸ್ತುಗಳ ಖರೀದಿ ಮತ್ತು ಮಾರಾಟ ಸಮಯವನ್ನು ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ವಿಸ್ತರಿಸಲಾಗಿದೆ.
ಕಾರ್ಯಕ್ರಮ ಆಯೋಜನೆಗೆ ಅವಕಾಶವಿಲ್ಲ: ಜಿಲ್ಲೆಯಲ್ಲಿ ಕೆಲವೊಂದು ವಿನಾಯತಿ ಇದ್ದರೂ, ಲಾಕ್ ಡೌನ್ ಮುಂದುವರಿಯಲಿದೆ. ಈ ನಡುವೆ ಕೆಲವು ಸಂಘ ಸಂಸ್ಥೆಗಳು ಸನ್ಮಾನ ಸೇರಿದಂತೆ ಇತರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಗಮನಕ್ಕೆ ಬಂದಿದೆ. ಆದರೆ ಇವು ಚಾಲ್ತಿಯಲ್ಲಿರುವ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ. ಆದ್ದರಿಂದ ಸಂಘ ಸಂಸ್ಥೆಗಳು ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ತಪ್ಪಿದಲ್ಲಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ