Advertisement

ಉಡುಪಿಯಲ್ಲಿ ಮಾರಾಮಾರಿ; ನಾಳೆ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಜಾರಿ

02:19 PM Sep 10, 2018 | Team Udayavani |

ಉಡುಪಿ: ಭಾರತ್ ಬಂದ್ ಸಂದರ್ಭದಲ್ಲಿ ಉಡುಪಿಯಲ್ಲಿ ಭಾರತೀಯ ಜನತಾ ಪಕ್ಷ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಬಿಜೆಪಿ ಮುಖಂಡ ಪ್ರಭಾಕರ್ ಪೂಜಾರಿ ಅವರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಭಾರೀ ಪ್ರತಿಭಟನೆ ನಡೆಯಿತು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿರುವ ಘಟನೆ ಸೋಮವಾರ ನಡೆದಿದೆ. ಈ ಹಿನ್ನೆಲೆಯಲ್ಲಿ ಉಡುಪಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ತಹಸೀಲ್ದಾರ್ ಪ್ರದೀಪ್ ಕುರುಡೇಕರ್ ಅವರು ಆದೇಶ ಹೊರಡಿಸಿದ್ದಾರೆ.

Advertisement

ಬನ್ನಂಜೆ ಸಮೀಪ ಬಿಜೆಪಿ ಮುಖಂಡ ಪ್ರಭಾಕರ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರ ನೇತೃತ್ವದಲ್ಲಿ ಲಾಠಿಚಾರ್ಜ್ ಮಾಡಿರುವುದಾಗಿ ವರದಿ ತಿಳಿಸಿದೆ.

ಅಂಗಡಿ ಮುಂಗಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರು ಬಲವಂತವಾಗಿ ಮುಚ್ಚಿಸಲು ಹೋದಾಗ ಬಿಜೆಪಿ ಕಾರ್ಯಕರ್ತರು ಅದನ್ನು ತಡೆಯಲು ಹೋದಾಗ ಹಲ್ಲೆ ನಡೆಸಿದ್ದರು. ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಗೆ ಲಾಠಿ ಏಟು ಬಿದ್ದಿದ್ದು, ಘರ್ಷಣೆ ವಿಕೋಪಕ್ಕೆ ಹೋಗಿರುವುದಾಗಿ ವರದಿ ವಿವರಿಸಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ಸಂಜೆಯಿಂದ ನಾಳೆ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next