Advertisement

Udupi: ಇಂದು ‘ಆದರ್ಶ ಶಿಕ್ಷಕ ಪ್ರಶಸ್ತಿ’ ಪ್ರದಾನ

10:48 AM Sep 06, 2024 | Team Udayavani |

ಉಡುಪಿ: ಆದರ್ಶ ಚಾರಿಟೆಬಲ್‌ ಟ್ರಸ್ಟ್‌, ಶ್ರೀ ಆದರ್ಶ ಕಾಲೇಜ್‌ ಆಫ್ ನರ್ಸಿಂಗ್‌, ಆದರ್ಶ ಇನ್‌ಸ್ಟಿಟ್ಯೂಟ್‌ ಆಫ್ ಅಲೈಡ್‌ ಹೆಲ್ತ್‌ ಸೈನ್ಸಸ್‌, ಆದರ್ಶ ಪ್ಯಾರಮೆಡಿಕಲ್‌ ಕಾಲೇಜು, ಆದರ್ಶ ಆಸ್ಪತ್ರೆ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಡಾ| ಸರ್ವೇಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮ ಜಯಂತಿ ಹಾಗೂ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಪ್ರಯುಕ್ತ ʼಆದರ್ಶ ಶಿಕ್ಷಕ ಪ್ರಶಸ್ತಿʼ ಪ್ರದಾನ ಸಮಾರಂಭವು ಸೆ. 6ರ ಬೆಳಗ್ಗೆ 9.30ರಿಂದ ಅಲೆವೂರು ಕೆಮ್ತೂರು ರಸ್ತೆಯಲ್ಲಿರುವ ಆದರ್ಶ ಸಮೂಹ ವಿದ್ಯಾಸಂಸ್ಥೆಗಳ ಸಂಕೀರ್ಣದಲ್ಲಿ ನಡೆಯಲಿದೆ.

Advertisement

ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ, ಸಮ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಯಶ್‌ಪಾಲ್‌ ಎ. ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್‌., ಅಲೆವೂರು ಗ್ರಾ.ಪಂ. ಅಧ್ಯಕ್ಷ ಯತೀಶ್‌ ಕುಮಾರ್‌, ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ ಮೆಂಟ್‌ನ ನಿರ್ದೇಶಕ ಶ್ರೀರಮಣ ಐತಾಳ್‌ ಉಪಸ್ಥಿತರಿರಲಿದ್ದಾರೆ ಎಂದು ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಜಿ.ಎಸ್‌. ಚಂದ್ರಶೇಖರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next