Advertisement

ವಿದ್ಯಾರ್ಥಿನಿ ಅಸ್ವಸ್ಥ… ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಿದ ಚಾಲಕ

10:29 AM Aug 22, 2024 | Team Udayavani |

ಉಡುಪಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಘಟನೆ ಗುರುವಾರ (ಆಗಸ್ಟ್ 22) ಉಡುಪಿಯಲ್ಲಿ ನಡೆದಿದೆ.

Advertisement

ಎಂದಿನಂತೆ ಮಂಗಳೂರಿನಿಂದ ಮಣಿಪಾಲಕ್ಕೆ ಹೊರಟಿದ್ದ ಎಕೆಎಂ ಎಸ್ (AKMS) ಬಸ್ಸಿಗೆ ಮೂಲ್ಕಿಯಲ್ಲಿ ವಿದ್ಯಾರ್ಥಿನಿಯೋರ್ವಳು ಉಡುಪಿಗೆ ತೆರಳಲು ಹತ್ತಿದ್ದಾಳೆ ಆದರೆ ಕಟಪಾಡಿ ದಾಟಿ ಉದ್ಯಾವರ ಸಮೀಪಿಸುತ್ತಿದ್ದಂತೆ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದಾಳೆ ಕೂಡಲೇ ಬಸ್ಸಿನ ಚಾಲಕ ನಸೀಫ್, ಹಾಗೂ ನಿರ್ವಾಹಕ ಮೋಹಿತ್ ಕೂಡಲೇ ಬಸ್ಸನ್ನು ಉಡುಪಿಯ ಟಿ.ಎಂ.ಎ . ಪೈ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ ಬಳಿಕ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ.

ವಿದ್ಯಾರ್ಥಿನಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ನೇರವಾದ ಎಕೆಎಂ ಎಸ್ ಚಾಲಕ ಹಾಗೂ ನಿರ್ವಾಹಕರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Pak Parliament: ಇಲಿ ಕಾಟ, ಪಾಕಿಸ್ಥಾನದ ಸಂಸತ್‌ ಭವನದಲ್ಲಿ ಬೆಕ್ಕು ಸಾಕಲು 12 ಲಕ್ಷ ವೆಚ್ಚ!

Advertisement
Advertisement

Udayavani is now on Telegram. Click here to join our channel and stay updated with the latest news.

Next