Advertisement

Udupi:ಪ್ರವಾಸಿ ವಾಹನಗಳಿಗೆ ಜಿಪಿಎಸ್,ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಪ್ರತಿಭಟನೆ

02:39 PM Jul 23, 2024 | Team Udayavani |

ಉಡುಪಿ: ಪ್ರವಾಸಿ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ವತಿಯಿಂದ  ಜಿಲ್ಲಾಧಿಕಾರಿ ಕಚೇರಿ ಎದುರು ಜು.23ರ ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

Advertisement

ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷ ಕೆ.ರಘುಪತಿ ಭಟ್ ಮಾತನಾಡಿ, ಟ್ಯಾಾಕ್ಸಿ ಉದ್ಯಮದವರು ಒಗ್ಗಟ್ಟಾಗಿ ಇದರ ವಿರುದ್ಧ ಹೋರಾಡಿದರೆ ಯಶಸ್ಸು ಸಿಗಲಿದೆ. ಸರಕಾರ ಮನಸ್ಸು ಮಾಡಿದರೆ ಈ ಸಮಸ್ಯೆಯನ್ನು ಸುಲಭದಲ್ಲಿ ಪರಿಹಾರ ಮಾಡಬಹುದು. ಟ್ಯಾಾಕ್ಸಿಯ ಹೊಸ ವಾಹನಗಳಿಗೆ ಅಳವಡಿಕೆ ಮಾಡುವ ನಿರ್ಧಾರವನ್ನು ಸರಕಾರ ಮಾಡಬೇಕು ಎಂದರು.

ಹಳೆ ವಾಹನಗಳಿಗೆ ಇದನ್ನು ಅಳವಡಿಸುವ ಸ್ಥಿತಿಯಲ್ಲಿ ಚಾಲಕರು-ಮಾಲಕರು ಇಲ್ಲ. ಈಗಾಗಲೇ ಟ್ಯಾಕ್ಸಿ ಚಾಲಕ-ಮಾಲಕರು ಹಲವಾರು ತೆರಿಗೆಗಳನ್ನು ಪಾವತಿಸಿ ನಷ್ಟದಲ್ಲಿ ದಿನ ದೂಡುತ್ತಿದ್ದಾಾರೆ. ಬೆಂಗಳೂರಿನಂತಹ ನಗರಗಳಲ್ಲಿ ಇದು ನಡೆಯಬಹುದು. ಆದರೆ ಸೀಮಿತ ಜನಸಂಖ್ಯೆ ಇರುವ ಉಡುಪಿಯಲ್ಲಿ ಇದು ಅಸಾಧ್ಯದ ಮಾತು ಎಂದು ಹೇಳಿದರು.

ವೈಟ್‌ಬೋರ್ಡ್‌ನಲ್ಲಿ ಬಾಡಿಗೆ ಮಾಡುವವರಿಗೆ ಸರಕಾರ ಕಡಿವಾಣ ಹಾಕಿದರೆ ಈ ಉದ್ಯಮ ಚೇತರಿಕೆ ಕಾಣಲು ಸಾಧ್ಯವಿದೆ. ಸರಕಾರ ಇದನ್ನು ಗಮನಿಸಿ ಕಳ್ಳ ಉದ್ಯಮಗಳನ್ನು ನಿಲ್ಲಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಗಮನಹರಿಸಬೇಕು. ಸಾಧ್ಯವಿದ್ದರೆ ಖಾಸಗಿಯಾಗಿ ಬಾಡಿಗೆ ಮಾಡುವ ವಾಹನಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ಟ್ಯಾಾಕ್ಸಿಮನ್‌ಗಳ ಧ್ವನಿಯನ್ನು ರಾಜ್ಯ ಸರಕಾರ ಗಂಭೀರವಾಗಿ ತೆಗೆದುಕೊಂಡು ಇದಕ್ಕೆ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದರು.

ಜಿಲ್ಲಾ ಟ್ಯಾಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ.ಕೋಟ್ಯಾನ್, ಕೆಟಿಡಿಓ ಅಧ್ಯಕ್ಷ ರಮೇಶ್ ಕುಂದಾಪುರ, ಉಪಾಧ್ಯಕ್ಷರಾದ ಮಂಜು ಪೂಜಾರಿ, ರಾಘವೇಂದ್ರ ಸೋಮಯಾಜಿ, ಜಯಕರ ಕುಂದರ್, ರವಿ ಶೆಟ್ಟಿ, ಸತೀಶ್ ನಾಯಕ್, ಕೋಶಾಧಿಕಾರಿ ಪ್ರಕಾಶ್ ಅಡಿಗ, ಜತೆ ಕೋಶಾಧಿಕಾರಿ ಕೃಷ್ಣ ಕೋಟ್ಯಾನ್, ಸಂಘಟನ ಕಾರ್ಯದರ್ಶಿಗಳಾದ ವಿಕ್ರಂ ರಾವ್, ಸತೀಶ್ ಶೆಟ್ಟಿ, ಮಹೇಶ್ ಕುಮಾರ್, ವಿನ್ಸಿ ಡಿ’ಸೋಜಾ ಮತ್ತಿತರರು ಉಪಸ್ಥಿತರಿದ್ದರು.

Advertisement

ಅನಂತರ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಹಾಗೂ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಪಿ.ನಾಯ್‌ಕ್‌ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next