Advertisement

Udupi ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ

11:25 AM Dec 11, 2023 | Team Udayavani |

ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವು ಜ. 17, 18ರಂದು ನಡೆಯಲಿದೆ. ಈ ನಿಮಿತ್ತ ಪರ್ಯಾಯೋತ್ಸವ ಸ್ವಾಗತ ಸಮಿತಿಯ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

Advertisement

ಅನಂತರ ಕ್ಷೇತ್ರದ ಧರ್ಮಾಧಿಕಾರಿ ಹಾಗೂ ಸ್ವಾಗತ ಸಮಿತಿಯ ಗೌರವ ಅಧ್ಯಕ್ಷರಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಪರ್ಯಾಯಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ವಿನಂತಿಸಿದರು.

ಡಾ| ಹೆಗ್ಗಡೆಯವರು ಶುಭ ಹಾರೈಸಿ, ಕ್ಷೇತ್ರದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಸ್ವಾಗತ ಸಮಿತಿ ಅಧ್ಯಕ್ಷ ಎಚ್‌.ಎಸ್‌. ಬಲ್ಲಾಳ್‌, ಕಾರ್ಯಾಧ್ಯಕ್ಷ ರಘುಪತಿ ಭಟ್‌, ಪ್ರಧಾನ ಕಾರ್ಯದರ್ಶಿ ಬೆಳಪು ದೇವಿಪ್ರಸಾದ್‌ ಶೆಟ್ಟಿ, ಕೋಶಾಧಿಕಾರಿ ರಂಜನ್‌ ಕಲ್ಕೂರ, ಸಂಚಾಲಕರಾದ ಸಂತೋಷ್‌ ಶೆಟ್ಟಿ ತೆಂಕರಗುತ್ತು, ರಮೇಶ್‌ ಭಟ್‌ ಕೆ., ಪ್ರವೀಣ್‌ ಶೆಟ್ಟಿ ಕಪ್ಪೆಟ್ಟು, ರಾಜೇಶ್‌ ಉಪ್ಪೂರು, ಶ್ರೀ ಮಠದ ದಿವಾನರಾದ ನಾಗರಾಜ ಆಚಾರ್ಯ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next