Advertisement

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

12:03 AM Jan 07, 2025 | Team Udayavani |

ಮಣಿಪಾಲ: ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಸೋಮವಾರ ಜರಗಿದ ಮತ ದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-ಅಂತಿಮ ಮತದಾರರ ಪಟ್ಟಿಯನ್ನು ಅವರು ರಾಜಕೀಯ ಪಕ್ಷಗಳಮುಖಂಡರಿಗೆ ಹಸ್ತಾಂತರಿಸಿ ಮಾತನಾಡಿದರು.

ಜಿಲ್ಲೆಯ ವಿಧಾನಸಭಾವಾರು ಅಂತಿಮ ಮತದಾರರ ಪಟ್ಟಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,17,890 ಪುರುಷರು, 1,22,914 ಮಹಿಳೆಯರು, ಇಬ್ಬರು ತೃತೀಯ ಲಿಂಗಿಗಳು ಸಹಿತ 2,40,806 ಮತದಾರರು, ಕುಂದಾಪುರದಲ್ಲಿ 1,01,959 ಪುರುಷರು, 1,10,025 ಮಹಿಳೆಯರು, ಇಬ್ಬರು ತೃತೀಯ ಲಿಂಗಿಗಳು ಸಹಿತ 2,11,986 ಮತದಾರರು, ಉಡುಪಿಯಲ್ಲಿ 1,06,782 ಪುರುಷರು, 1,14,839 ಮಹಿಳೆಯರು, ಮೂವರು ತೃತೀಯ ಲಿಂಗಿಗಳು ಸಹಿತ 2,21,624, ಕಾಪು ಕ್ಷೇತ್ರದಲ್ಲಿ 92,598 ಪುರುಷರು, 1,00,583 ಮಹಿಳೆಯರು, ನಾಲ್ವರು ತೃತೀಯ ಲಿಂಗಿಗಳು ಸಹಿತ 1,93,185, ಕಾರ್ಕಳದಲ್ಲಿ 93,003 ಪುರುಷರು, 1,00,685 ಮಹಿಳೆಯರು ಸಹಿತ 1,93,688 ಹಾಗೂ ಜಿಲ್ಲೆಯಲ್ಲಿ ಒಟ್ಟು 5,12,232 ಪುರುಷರು, 5,49,046 ಮಹಿಳೆಯರು, 11 ತೃತೀಯ ಲಿಂಗಿಗಳು ಸಹಿತ 10,61,289 ಮತದಾರರಿದ್ದಾರೆ ಎಂದು ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ನಮೂನೆ-6ರಲ್ಲಿ 3,998, ನಮೂನೆ-6ಎಯಲ್ಲಿ 1, ನಮೂನೆ-8ರಲ್ಲಿ 1,288 ಸಹಿತ ಒಟ್ಟು 5,287 ಜನರು ಹೊಸದಾಗಿ ಸೇರ್ಪಡೆಗೆ ಅರ್ಜಿ ಸಲ್ಲಿಸಿ, 5,286 ಯುವ ಮತದಾರರು ಹೊಸದಾಗಿ ನೋಂದಣಿಯಾಗಿದ್ದಾರೆ. ನಮೂನೆ- 7ರಲ್ಲಿ 7,398 ಅರ್ಜಿಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಹಾಗೂ ನಮೂನೆ-8ರಲ್ಲಿ ತಿದ್ದುಪಡಿಗಾಗಿ 5,499 ಜನರಿಂದ ಅರ್ಜಿಗಳು ಸಲ್ಲಿಕೆಯಾಗಿದ್ದು, 7,398 ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. 5,499 ಮತದಾರರ ಹೆಸರನ್ನು ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದರು.

ಮತದಾರರ ಪಟ್ಟಿಗೆ ಸಂಬಂಧಿಸಿ ಯಾವುದೇ ರೀತಿಯ ಮಾಹಿತಿಯನ್ನು ಪಡೆಯಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ವೋಟರ್‌ ಹೆಲ್ಪ್ಲೈನ್‌ ನಂ: 1950 ಇದೆ ಎಂದರು.

Advertisement

ಜಿಲ್ಲೆಯ ಕರಡು ಮತದಾರರ ಪಟ್ಟಿ ಹಾಗೂ ಅವುಗಳ ಸಿ.ಡಿ ಯನ್ನು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಲಾಯಿತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್‌., ವಾರ್ತಾಧಿಕಾರಿ ಮಂಜುನಾಥ್‌ ಬಿ., ಬಿಜೆಪಿ ಮುಖಂಡ ಚಂದ್ರಶೇಖರ ಪ್ರಭು, ಕಾಂಗ್ರೆಸ್‌ ಮುಖಂಡ ಹಬೀಬ್‌ ಅಲಿ, ಜೆಡಿಎಸ್‌ ಮುಖಂಡ ಜಯರಾಮ ಆಚಾರ್ಯ ಉಪಸ್ಥಿತರಿದ್ದರು.

ಜ. 25: ರಾಷ್ಟ್ರೀಯ ಮತದಾರರ ದಿನಾಚರಣೆ
ಜ. 25ರಂದು ಜಿಲ್ಲಾಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆಯು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಗುವುದು ಎಂದು ತಿಳಿಸಿದರು.

ದ.ಕ.ದಲ್ಲಿ 18,13,556 ಮತದಾರರು
ಮಂಗಳೂರು: ಚುನಾವಣ ಆಯೋಗ ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18,13,556 ಮತದಾರರು ಇದ್ದಾರೆ. ಈ ಪೈಕಿ 8,84,373 ಪುರುಷರು, 9,29,115 ಮಹಿಳೆಯರು ಹಾಗೂ ಮಂಗಳಮುಖೀಯರು-68 ಮಂದಿ ಮತದಾರರಾಗಿದ್ದಾರೆ.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ಸೋಮವಾರ ತಮ್ಮ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿದರು.

ವಿಧಾನಸಭಾವಾರು ಅಂತಿಮ ಮತದಾರರ ಪಟ್ಟಿಯಲ್ಲಿ ಬೆಳ್ತಂಗಡಿ-2,32,235, ಮೂಡುಬಿದಿರೆ-2,10,088, ಮಂಗಳೂರು ನಗರ ಉತ್ತರ-2,55,515, ಮಂಗಳೂರು ನಗರ ದಕ್ಷಿಣ-2,52,268, ಮಂಗಳೂರು-2,10,127, ಬಂಟ್ವಾಳ-2,28,962, ಪುತ್ತೂರು-2,16,068, ಸುಳ್ಯ-2,08,293 ಮತದಾರರಿದ್ದಾರೆ.

18 ವರ್ಷ ತುಂಬುವ ಮತದಾರರ ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು ಹಾಗೂ ನಿರಂತರ ಪರಿಷ್ಕರಣೆಯ ಸಂದರ್ಭದಲ್ಲಿ ತೆಗೆದು ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next