Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಸೋಮವಾರ ಜರಗಿದ ಮತ ದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-ಅಂತಿಮ ಮತದಾರರ ಪಟ್ಟಿಯನ್ನು ಅವರು ರಾಜಕೀಯ ಪಕ್ಷಗಳಮುಖಂಡರಿಗೆ ಹಸ್ತಾಂತರಿಸಿ ಮಾತನಾಡಿದರು.
Related Articles
Advertisement
ಜಿಲ್ಲೆಯ ಕರಡು ಮತದಾರರ ಪಟ್ಟಿ ಹಾಗೂ ಅವುಗಳ ಸಿ.ಡಿ ಯನ್ನು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಲಾಯಿತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ವಾರ್ತಾಧಿಕಾರಿ ಮಂಜುನಾಥ್ ಬಿ., ಬಿಜೆಪಿ ಮುಖಂಡ ಚಂದ್ರಶೇಖರ ಪ್ರಭು, ಕಾಂಗ್ರೆಸ್ ಮುಖಂಡ ಹಬೀಬ್ ಅಲಿ, ಜೆಡಿಎಸ್ ಮುಖಂಡ ಜಯರಾಮ ಆಚಾರ್ಯ ಉಪಸ್ಥಿತರಿದ್ದರು.
ಜ. 25: ರಾಷ್ಟ್ರೀಯ ಮತದಾರರ ದಿನಾಚರಣೆಜ. 25ರಂದು ಜಿಲ್ಲಾಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆಯು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಗುವುದು ಎಂದು ತಿಳಿಸಿದರು. ದ.ಕ.ದಲ್ಲಿ 18,13,556 ಮತದಾರರು
ಮಂಗಳೂರು: ಚುನಾವಣ ಆಯೋಗ ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18,13,556 ಮತದಾರರು ಇದ್ದಾರೆ. ಈ ಪೈಕಿ 8,84,373 ಪುರುಷರು, 9,29,115 ಮಹಿಳೆಯರು ಹಾಗೂ ಮಂಗಳಮುಖೀಯರು-68 ಮಂದಿ ಮತದಾರರಾಗಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೋಮವಾರ ತಮ್ಮ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿದರು. ವಿಧಾನಸಭಾವಾರು ಅಂತಿಮ ಮತದಾರರ ಪಟ್ಟಿಯಲ್ಲಿ ಬೆಳ್ತಂಗಡಿ-2,32,235, ಮೂಡುಬಿದಿರೆ-2,10,088, ಮಂಗಳೂರು ನಗರ ಉತ್ತರ-2,55,515, ಮಂಗಳೂರು ನಗರ ದಕ್ಷಿಣ-2,52,268, ಮಂಗಳೂರು-2,10,127, ಬಂಟ್ವಾಳ-2,28,962, ಪುತ್ತೂರು-2,16,068, ಸುಳ್ಯ-2,08,293 ಮತದಾರರಿದ್ದಾರೆ. 18 ವರ್ಷ ತುಂಬುವ ಮತದಾರರ ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು ಹಾಗೂ ನಿರಂತರ ಪರಿಷ್ಕರಣೆಯ ಸಂದರ್ಭದಲ್ಲಿ ತೆಗೆದು ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟನೆ ತಿಳಿಸಿದೆ.