Advertisement
ವಾಹನಗಳ ಪರವಾನಿಗೆ ನವೀಕರಣ, ಹೊಸ ಪರವಾನಿಗೆ ಪಡೆಯಲು, ದಾಖಲೆ ಸಲ್ಲಿಕೆ, ಸಹಿತ ವಿವಿಧ ಕೆಲಸಗಳಿಗೆ ದಿನನಿತ್ಯ ಹಲವು ಮಂದಿ ಆರ್‌ಟಿಒ ಕಚೇರಿಗಳಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ಸಿಬಂದಿ ಕಡಿಮೆ ಇರುವ ಕಾರಣದಿಂದಾಗಿ ಗ್ರಾಹಕರು ಅನಗತ್ಯವಾಗಿ ಸಮಯ ವ್ಯಯ ಮಾಡಬೇಕಾದ ಸನ್ನಿವೇಶವೂ ಎದುರಾಗುತ್ತಿದೆ.
ಉಡುಪಿ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಸಿಬಂದಿ ಕೊರತೆ ಇದ್ದರೂ ಇಬ್ಬರು ಸಿಬಂದಿಯನ್ನು ಬೇರೆ ಕಚೇರಿಗಳಿಗೆ ನಿಯೋಜನೆಗೆ ಒಳಪಡಿ ಸಿರುವುದು ವಿಶೇಷ. ಓರ್ವ ಚಾಲಕ ಬೇರೆಡೆಗೆ ನಿಯೋಜನೆ
ಪ್ರಥಮ ದರ್ಜೆ ಸಹಾಯಕರು-1, ಓರ್ವ ಚಾಲಕ ಬೇರೆಡೆಗೆ ನಿಯೋಜನೆಗೊಂಡಿದ್ದಾರೆ. ಓರ್ವ ಮೋಟಾರು ವಾಹನ ನಿರೀಕ್ಷಕರು, ದ್ವಿತೀಯ ದರ್ಜೆ ಸಹಾಯಕರು, ಓರ್ವರು ಸಹಾಯಕ ಪ್ರಾದೇಶಿಕ ಅಧಿಕಾರಿ ಬೇರೆ ಜಿಲ್ಲೆಯಿಂದ ಇಲ್ಲಿ ಬಂದು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Related Articles
ಉಡುಪಿ ಸಾರಿಗೆ ಕಚೇರಿಯಲ್ಲಿ ಮಂಜೂರಾದ 36 ಹುದ್ದೆಗಳ ಪೈಕಿ 20 ಹುದ್ದೆಗಳು ಖಾಲಿ ಇದ್ದು, ಮುಖ್ಯವಾಗಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ, ಲೆಕ್ಕ ಪತ್ರಾಧಿಕಾರಿ ಹುದ್ದೆ ಖಾಲಿಯಿದೆ. ಹಿರಿಯ ಅಧೀಕ್ಷಕರ ಎರಡು ಹುದ್ದೆಯೂ ಖಾಲಿ ಬಿದ್ದಿವೆ. ಕಚೇರಿ ಮೇಲ್ವಿಚಾರಕರ ಒಟ್ಟು 3 ಹುದ್ದೆಗಳಲ್ಲಿ 1 ಹುದ್ದೆ ಖಾಲಿಯಿದೆ. ಮೋಟಾರು ವಾಹನ ನಿರೀಕ್ಷಕರ 5 ಹುದ್ದೆಗಳಲ್ಲಿ ಮೂವರಷ್ಟೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಥಮ ದರ್ಜೆ ಸಹಾಯಕರ 6 ಹುದ್ದೆಗಳ ಪೈಕಿ ಎಲ್ಲವೂ ಭರ್ತಿಯಾಗಿವೆ. ಒಬ್ಬರು ಮಂಗಳೂರಿನಿಂದ ಇಲ್ಲಿಗೆ ವರ್ಗಾವಣೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬೆರಳಚ್ಚುಗಾರರ 2 ಹುದ್ದೆಯಲ್ಲಿ 1 ಹುದ್ದೆ ಖಾಲಿಯಿದೆ. ದ್ವಿತೀಯ ದರ್ಜೆ ಸಹಾಯಕರ 8 ಹುದ್ದೆಗಳ ಪೈಕಿ ಓರ್ವ ಸಿಬಂದಿ ಮಾತ್ರ ಇದ್ದಾರೆ.ಚಾಲಕ 3ಹುದ್ದೆಗಳ ಪೈಕಿ 1 ಹುದ್ದೆ ಭರ್ತಿಯಾಗಿದೆ. ಒಬ್ಬರನ್ನು ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಗ್ರೂಪ್ “ಡಿ’ ಅಧಿಕಾರಿಗಳ 4 ಹುದ್ದೆಗಳ ಪೈಕಿ 1 ಹುದ್ದೆ ಮಾತ್ರ ಭರ್ತಿಯಾಗಿದ್ದು, 3 ಹುದ್ದೆಗಳು ಖಾಲಿಯಾಗಿವೆ.
Advertisement
ಸರಕಾರದ ಗಮನಕ್ಕೆ ತರಲಾಗಿದೆಉಡುಪಿಯ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಶೇ.50ಕ್ಕಿಂತಲೂ ಅಧಿಕ ಹುದ್ದೆ ಖಾಲಿಯಿವೆ. ಇದರಿಂದ ಕಾರ್ಯ ನಿರ್ವಹಿಸುತ್ತಿರುವ ಸಿಬಂದಿಗೆ ಹೆಚ್ಚುವರಿ ಒತ್ತಡ ಬೀಳುತ್ತಿದೆ. ವರ್ಗಾವಣೆ, ನಿವೃತ್ತಿ ಸಹಿತ ಹಲವು ಕಾರಣಗಳಿಂದ ಉದ್ಯೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಸರಕಾರದ ಗಮನಕ್ಕೂ ತರಲಾಗಿದೆ. -ರಾಮಕೃಷ್ಣ ರೈ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ