ಉಡುಪಿ : ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲೆ ಮತ್ತು ಪದವಿ ವಿಭಾಗದ ಕಾಲೇಜುಗಳಿಗೆ ಮೇ, 20 ಶುಕ್ರವಾರ ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ರಜೆ ಘೋಷಣೆ ಮಾಡಿದ್ದಾರೆ. ಅಂಗನವಾಡಿ, ಸರಕಾರಿ, ಖಾಸಗಿ, ಮತ್ತು ಪದವಿ ಪೂರ್ವ ಇಲಾಖೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಗುರುವಾರವೂ ನಿರಂತರವಾಗಿ ಮಳೆ ಸುರಿದಿದ್ದು, ಶುಕ್ರವಾರ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ : ಭಟ್ಕಳ: ಭಾರಿ ಮಳೆಗೆ ತಗ್ಗು ಪ್ರದೇಶಗಳು ಜಲಾವೃತ, ಆತಂಕದಲ್ಲಿ ಜನತೆ
Related Articles
ಶಿವಮೊಗ್ಗ ಶಾಲೆಗಳಿಗೂ ರಜೆ
ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ಎಡೆಬಿಡದೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.20ರ ಶುಕ್ರವಾರ ಸಹ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ.