Advertisement

ಉಡುಪಿ: ಜಿಲ್ಲೆಯಲ್ಲಿ ಫೆ .14 -19 ವರೆಗೆ ಸೆಕ್ಷನ್ 144 ಜಾರಿ

10:44 AM Feb 13, 2022 | Team Udayavani |

ಉಡುಪಿ: ನಗರದಲ್ಲಿ ಹಿಜಾಬ್ ಕೇಸರಿ ವಿವಾದ ಹಿನ್ನೆಲೆಯಲ್ಲಿ ಫೆ.14 ರಿಂದ 19 ವರೆಗೆ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.

Advertisement

ರಾಜ್ಯಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಸೋಮವಾರ ಶಾಲಾ-ಕಾಲೇಜುಗಳು ಆರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಫೆ.14 ರಿಂದ ಫೆಬ್ರವರಿ 19 ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, ಮೆರವಣಿಗೆ, ಪರ ವಿರುದ್ಧ ಘೋಷಣೆ ಕೂಗುವಂತಿಲ್ಲ. ಯಾವುದೇ ವ್ಯಕ್ತಿ, ಜಾತಿ ಧರ್ಮದ ವಿರುದ್ಧ ನಡೆದುಕೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next