ಉಡುಪಿ : ಉಡುಪಿ ಕೃಷ್ಣ ಮಠಗಳಲ್ಲಿ ಒಂದಾದ ಶೀರೂರು ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕ ಮಹೋತ್ಸವದ ಪೂರ್ವಭಾವಿ ಧಾರ್ಮಿಕ ಕಾರ್ಯಕ್ರಮಗಳು ಇಂದು(ಮಂಗಳವಾರ, ಮೇ.11) ಶೀರೂರು ಮೂಲ ಮಠದಲ್ಲಿ ನಡೆಯಿತು.
ಚಿ.ಅನಿರುದ್ಧ ಸರಳತ್ತಾಯ ಶೀರೂರು ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ನಿಯೋಜನೆಗೊಳ್ಳಲಿದ್ದು, ಪಟ್ಟಾಭಿಷೇಕ ಮಹೋತ್ಸವದ ಪೂರ್ವಭಾವಿಯಾಗಿ ದೇವತಾ ಪ್ರಾರ್ಥನೆ , ವಟುವಿಗೆ ಫಲ ಪ್ರದಾನ ಹಾಗೂ ಗಣಪತಿ ಹೋಮ, ಬ್ರಹ್ಮಕೂರ್ಚ ಹೋಮ,ಪವಮಾನ ಪೂಯಮಾನ ಮಂಡಲ ಹೋಮ, ಧನ್ವಂತರಿ ಹೋಮ, ನವಗ್ರಹ ಹೋಮ, ತಿಲಹೋಮ ಪ್ರಾಯಶ್ಚಿತ್ತ ಯಾಗಾದಿ ಕರ್ಮಾಂಗಗಳು ಸೋದೆ ವಾದಿರಾಜ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥರ ಉಪಸ್ಥಿತಿಯಲ್ಲಿ ಶೀರೂರು ಮೂಲ ಮಠದಲ್ಲಿ ನಡೆಯಿತು.
ಇದನ್ನೂ ಓದಿ : ಅಕ್ರಮವಾಗಿ ರೆಮ್‌ಡಿಸಿವಿರ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ
ಅವಧಾನಿ ಸುಬ್ರಹ್ಮಣ್ಯ ಭಟ್ಟ ಹಾಗೂ ವಿದ್ವಾನ್ ಗಿರಿರಾಜ ಉಪಾಧ್ಯಾಯರ ಆಚಾರ್ಯತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ದಿವಾನರಾದ ಶ್ರೀನಿವಾಸ ತಂತ್ರಿಗಳು ಹಾಗೂ ವಟುವಿನ ಪೋಷಕರಾದ ಶ್ರೀವಿದ್ಯಾ ಮತ್ತು ವಿದ್ವಾನ್ ಉದಯಕುಮಾರ ಸರಳತ್ತಾಯ ಈ ಸಂದರ್ಭ ಉಪಸ್ಥಿತರಿದ್ದರು.
ಇದನ್ನೂ ಓದಿ : ರಸ್ತೆ ಮಧ್ಯ ಉರುಳಿ ಬಿದ್ದ ಪಿಕ್ಅಪ್ ವಾಹನವನ್ನು ಎಳೆದು ನಿಲ್ಲಿಸಿದ ಸ್ಥಳೀಯ ಆಫ್ ರೋಡರ್ ಟೀಮ್