Advertisement

Pocso Case: ವೀಡಿಯೋ ಮಾಡಿರುವ ಬಗ್ಗೆ ಮಾಹಿತಿಯಿಲ್ಲ: ಎಸ್ಪಿ

09:01 PM Jun 02, 2024 | Team Udayavani |

ಕುಂದಾಪುರ: ಅಮಾಸೆಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 18ರಂದೇ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತ ವೀಡಿಯೋ ರೆಕಾರ್ಡಿಂಗ್‌ ಮಾಡಿರುವ ಹಾಗೂ ಆ ವೀಡಿಯೋ ಮೂಲಕ ಬೆದರಿಸಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ಸ್ಪಷ್ಟಪಡಿಸಿದ್ದಾರೆ.

Advertisement

ಆರೋಪಿ ವೀಡಿಯೋ ಮಾಡಿಕೊಂಡಿರುವ ಬಗ್ಗೆ ಅಥವಾ ಹಿಂದೆ ಬೇರೆಯವರಿಗೂ ಈ ರೀತಿ ವೀಡಿಯೋ ಮಾಡಿ, ಅದನ್ನು ಬೆದರಿಕೆ ಹಾಕಿ, ದೌರ್ಜನ್ಯ ಎಸಗಿರುವ ಬಗ್ಗೆ ಸದ್ಯಕ್ಕೆ ನಮ್ಮ ಬಳಿ ಯಾವುದೇ ಮಾಹಿತಿಯಿಲ್ಲ. ನ್ಯಾಯಾಧೀಶರ ಮುಂದೆ ಸಂತ್ರಸ್ತೆ ನೀಡಿದ ಹೇಳಿಕೆಯಲ್ಲಿ ಇಬ್ಬರೂ ಒಂದೇ ಸಮುದಾಯವರಾಗಿದ್ದು, ಕೆಲವು ಸಮಯಗಳಿಂದ ಸಂಪರ್ಕದಲ್ಲಿದ್ದರು. ಆದರೆ ವೀಡಿಯೋ ರೆಕಾರ್ಡಿಂಗ್‌ ಬಗ್ಗೆ ಯಾವುದೇ ಹೇಳಿಕೆ ನೀಡಿರಲಿಲ್ಲ. ಆತನ ಲ್ಯಾಪ್‌ಟಾಪ್‌ ವಶಪಡಿಸಿಕೊಂಡಿದ್ದು, ಅದರ ಮೂಲಕ ಮಾಹಿತಿ, ದಾಖಲೆಗಳನ್ನು ಸಂಗ್ರಹಿಸಲಾಗುವುದು ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಆರೋಪಿ ಶ್ರೇಯಸ್‌ ನಾಯ್ಕ (25) ಪಿಯುಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾರಿನಲ್ಲಿ ಹಾಲಾಡಿ ರಸ್ತೆಯ ಹೆಗ್ಗೊಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿ, ಆಕೆಯ ಅಶ್ಲೀಲ ಫೋಟೋವನ್ನು ತೆಗೆದ ಬಗ್ಗೆ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ನಿರಂತರವಾಗಿ ಆತ ಆಕೆಯ ಮೇಲೆ ದೌರ್ಜನ್ಯ ನಡೆಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸದ್ಯ ಆರೋಪಿ ಶ್ರೇಯಸ್‌ ಪರಾರಿಯಾಗಿದ್ದಾನೆ.

ಇದನ್ನೂ ಓದಿ: Rabkavi Banhatti; ಪೌರ ಕಾರ್ಮಿಕರ ಕೊರತೆ: ನಗರಸಭೆಗೆ ಸವಾಲಾದ ಕಸ ವಿಲೇವಾರಿ

Advertisement

Udayavani is now on Telegram. Click here to join our channel and stay updated with the latest news.

Next