Advertisement

ಉಡುಪಿ: ಮಕ್ಕಳ ಕಳ್ಳತನ; ಸಂಶಯಾಸ್ಪದ ವ್ಯಕ್ತಿಗಳ ಮಾಹಿತಿ ನೀಡಲು ಎಸ್‌ಪಿ ಸೂಚನೆ

11:15 PM Sep 15, 2022 | Team Udayavani |

ಉಡುಪಿ: ಮಕ್ಕಳ ಕಳ್ಳತನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ಮೇಲೆ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚ್ಚೀಂದ್ರ ತಿಳಿಸಿದ್ದಾರೆ.

Advertisement

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂಬ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ದೇಶ, ರಾಜ್ಯದ ವೀಡಿಯೋಗಳನ್ನು ಪ್ರಕಟಿಸಲಾಗುತ್ತಿದೆ. ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ನಡೆಯುವ ಬಗ್ಗೆ ತಿಳಿದುಬಂದಿದೆ.

ಸಾರ್ವಜನಿಕರು ತಮ್ಮ ನಗರ, ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದರೆ 112 ಸಹಾಯವಾಣಿಗೆ ಕರೆ ಮಾಡಬೇಕು. ಇದರಿಂದ ಕೂಡಲೇ ಘಟನ ಸ್ಥಳಕ್ಕೆ ಪೊಲೀಸರು ಬಂದು ಕೂಲಂಕಷವಾಗಿ ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next