Advertisement
ಮರಳುಗಾರಿಕೆ ಸಂಬಂಧಿಸಿದಂತೆ ಮಾರ್ಚ್‌ನಲ್ಲಿ 17, ಎಪ್ರಿಲ್‌ನಲ್ಲಿ 8 ಹಾಗೂ ಮೇ ತಿಂಗಳಲ್ಲಿ 19 ಸಹಿತ ಒಟ್ಟು 44 ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿವೆ ಎಂದು ಎಸ್‌ಪಿಯವರು ತಿಳಿಸಿದರು. ಶುಕ್ರವಾರ ನಡೆದ ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಅವರು ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಈ ಮಾಹಿತಿ ನೀಡಿದರು.
ಬೈಂದೂರು-ಉಪ್ಪುಂದ ಬಳಿ ಅಸ್ತವ್ಯಸ್ತವಾಗಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುತ್ತಿದ್ದರೆ ಈ ಬಗ್ಗೆ ಗಮನಹರಿಸುವಂತೆ ನಾಗರಿಕರೊಬ್ಬರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಪಿಯವರು ಈ ಬಗ್ಗೆ ರಸ್ತೆ ಸುರಕ್ಷಾ ಅಭಿಯಾನದ ಮೂಲಕ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದರು.
Related Articles
ಬೈಂದೂರು ಪರಿಸರದಲ್ಲಿ ವೈನ್ ಸ್ಟೋರ್‌ಗಳು ನಿಗದಿತ ಸಮಯಕ್ಕಿಂತ ಮೊದಲೇ ತೆರೆಯುತ್ತವೆ. ಅಲ್ಲದೆ ಮಟ್ಕಾ ಹಾವಳಿಯೂ ನಡೆಯುತ್ತಿದೆ. ಅಂಡರ್ ಪಾಸ್ ಬಳಿ ಹಗಲಿಡೀ ರಾತ್ರಿ ಚಲಿಸುವ ಬಸ್ ಗಳನ್ನು ನಿಲ್ಲಿಸುವುದರಿಂದ ಸಂಚಾರ ಸಮಸ್ಯೆ ಉಂಟಾಗುತ್ತಿದೆ ಎಂದು ನಾಗರಿಕರೊಬ್ಬರು ತಿಳಿಸಿದರು.
Advertisement
ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಎಸ್‌ಪಿಯವರು ತಿಳಿಸಿದರು.
ಫೋನ್ ಇನ್ ವೇಳೆ ಉಡುಪಿ ಡಿವೈಎಸ್‌ಪಿ ಜೈಶಂಕರ್, ಉಡುಪಿ ಸರ್ಕಲ್ ಇನ್‌ಸ್ಪೆಕ್ಟರ್ ಮಂಜುನಾಥ್, ಟ್ರಾಫಿಕ್ ಎಸ್‌ಐ ನಿತ್ಯಾನಂದ ಗೌಡ, ಕುಂದಾಪುರ ಡಿವೈಎಸ್‌ಪಿ ದಿನೇಶ್, ಕಾಪು ಸರ್ಕಲ್ ಇನ್‌ಸ್ಪೆಕ್ಟರ್ ಶಾಂತಾರಾಮ್ ಉಪಸ್ಥಿತರಿದ್ದರು.
ಕಾರ್ಕಳದಿಂದ ಅಧಿಕ ದೂರುಎಸ್ಪಿ ಫೋನ್ ಇನ್ ಕಾರ್ಯಕ್ರಮದಲ್ಲಿ ಕಾರ್ಕಳ ಭಾಗದಿಂದ ಅತ್ಯಧಿಕ ದೂರುಗಳು ಬಂದರು. ಟ್ರಾಫಿಕ್ ವಿಚಾರಕ್ಕೆ ಸಂಬಂಧಿಸಿದಂತೆ ಅನಧಿಕೃತ ವಾಹನ ಪಾರ್ಕಿಂಗ್ ಬಗ್ಗೆ ಅಧಿಕ ಕರೆಗಳು ದಾಖಲಾದವು. ಇತರ ದೂರುಗಳು
* ಕುಂದಾಪುರದ ಕೆಲವೊಂದು ಬಾರ್, ರೆಸ್ಟೋರೆಂಟ್ ಗಳಲ್ಲಿ ಸಾರ್ವಜನಿಕವಾಗಿ ಧೂಮಪಾನ ಮಾಡಲಾಗುತ್ತಿದೆ. ಇಲ್ಲಿ ಯಾವುದೇ ಸ್ಮೋಕಿಂಗ್ ಝೊàನ್‌ಗಳನ್ನು ಮಾಡಿಲ್ಲ ಎಂದು ನಾಗರಿಕರೊಬ್ಬರು ತಿಳಿಸಿದರು.
*ಬ್ರಹ್ಮಾವರದಲ್ಲಿ ಟ್ರಾಫಿಕ್ ಸಮಸ್ಯೆ ಇದ್ದು, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.
* ಕುಂಜಾಲು ಪರಿಸರದಲ್ಲಿ ದ್ವಿಚಕ್ರ ಮತ್ತು ಆಟೋ ರಿಕ್ಷಾಗಳು ಯಾವುದೇ ಸೂಚನೆ ನೀಡದೆ ವಾಹನ ಚಾಲನೆ ಮಾಡುತ್ತಿದ್ದಾರೆ.