Advertisement
ಹಬ್ಬದ ವಿಶೇಷ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೊ ತಮ್ಮ ಅಧಿಕೃತ ಚರ್ಚ್ ಕಲ್ಯಾಣಪುರದ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಬಲಿಪೂಜೆ ಅರ್ಪಿಸಿ ಹಬ್ಬದ ಸಂದೇಶ ನೀಡಿದರು. ಈ ವೇಳೆ ಚರ್ಚಿನ ವಂ| ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ| ಜೋಯ್ ಅಂದ್ರಾದೆ ಉಪಸ್ಥಿತರಿದ್ದರು.
Related Articles
Advertisement
ಶುಕ್ರವಾರ ರಾತ್ರಿ ಪೂಜೆಯ ವೇಳೆ ಸಿಂಗರಿಸಿಟ್ಟ ಗೋದಲಿಯಲ್ಲಿ ಬಾಲಯೇಸು ಮೂರ್ತಿಯನ್ನು ಇಟ್ಟು ದೇವರ ಸ್ತುತಿ, ಜೋಗುಳದ ಮೂಲಕ ಭಕ್ತರು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಹೂವು, ಸುಗಂಧಗಳನ್ನು ಅರ್ಪಿಸುವುದರ ಮೂಲಕ ಯೇಸು ಸ್ವಾಮಿಯ ಜನನವನ್ನು ಸ್ವಾಗತಿಸಲಾಯಿತು.
ಜಿÇÉೆಯ ಪ್ರಮುಖ ಚರ್ಚ್‌ಗಳಾದ ಶಿರ್ವ ಆರೋಗ್ಯ ಮಾತೆಯ ದೇವಾಲಯದಲ್ಲಿ ಧರ್ಮಗುರು ರೆ| ಡೆನಿಸ್ ಡೇಸಾ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮಗುರು ರೆ| ಚಾಲ್ಸ್ ಮಿನೇಜಸ್, ಕುಂದಾಪುರ ಹೊಲಿ ರೋಸರಿ ಚರ್ಚ್‌ನಲ್ಲಿ ರೆ| ಸ್ಟ್ಯಾನಿ ತಾವ್ರೋ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ರೆ| ಆಲ್ಬನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆಯ ಬಲಿಪೂಜೆ ನೆರವೇರಿಸಲಾಯಿತು.
ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲೆ ಯ ಎಲ್ಲ ಚರ್ಚ್‌ಗಳಲ್ಲಿ ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸರಕಾರ ಅವಕಾಶ ನೀಡಿರುವುದರಿಂದ ಧರ್ಮಪ್ರಾಂತದ ಚರ್ಚುಗಳಲ್ಲಿ ಬಲಿಪೂಜೆಯ ಬಳಿಕ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿತ್ತು. ಪೂಜೆಯ ಸಂದರ್ಭ ಎಲ್ಲ ಚರ್ಚ್‌ಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯ ವಾಗಿ ಪಾಲಿಸಲಾಗಿತ್ತು.