Advertisement
ಪ್ರಸ್ತುತ ಅಗತ್ಯದ ಸೇವಾ ಪರಿಚಾರಕರು ಮಾತ್ರ ಮಠದೊಳಗಿದ್ದು ಪೂಜಾ ಕೈಂಕರ್ಯ ನಡೆಸುತ್ತಿದ್ದಾರೆ. ಅವರಾರೂ ಹೊರಗೆ ಹೋಗುತ್ತಿಲ್ಲ, ಹೊರಗಿದ್ದವರನ್ನು ಒಳಗೆ ಬಿಡುತ್ತಿಲ್ಲ.
ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ಪ್ರವೇಶಾ ವಕಾಶ ಕಲ್ಪಿಸುವಾಗ ಇದುವರೆಗೆ ಇದ್ದಂತೆ ರಾಜಾಂಗಣದ ಪ್ರದೇಶದಿಂದ ಭೋಜನಶಾಲೆಯ ಉಪ್ಪರಿಗೆ ಮೂಲಕ ಶ್ರೀಕೃಷ್ಣ ದರ್ಶನಕ್ಕೆ ಅವಕಾಶ ನೀಡಲು ಚಿಂತನೆ ನಡೆಸಲಾಗುತ್ತಿದೆ. ಸಾಮಾಜಿಕ ಅಂತರವನ್ನು ಪರಿಣಾಮಕಾರಿಯಾಗಿ ಕಾಪಾಡಲು ಇದರಿಂದ ಸಾಧ್ಯವಾ ಗುತ್ತದೆ ಎಂದು ಶ್ರೀಕೃಷ್ಣ ಸೇವಾ ಬಳಗದ ಗೋವಿಂದರಾಜ್ ತಿಳಿಸಿದ್ದಾರೆ.
Related Articles
ಶ್ರೀಕೃಷ್ಣ ಮಠದಲ್ಲಿ ಪೂಜೆ ಪುನಸ್ಕಾರಗಳು ಮತ್ತು ಪ್ರವಚನಗಳು ಆನ್‌ಲೈನ್‌ನಲ್ಲಿ ನಡೆಯುತ್ತಿವೆ. ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಪ್ರವಚನಗಳನ್ನು, ಬೆಳಗ್ಗೆ, ಮಧ್ಯಾಹ್ನದ ಪೂಜೆಗಳನ್ನೂ ಆನ್‌ಲೈನ್‌ನಲ್ಲಿ ಬಿತ್ತರಿಸಲಾಗುತ್ತಿದೆ. ರಾಜಾಂಗಣದಲ್ಲಿ ನಡೆಯುತ್ತಿದ್ದ ವಿದ್ವಾಂಸರ ಪ್ರವಚನಗಳೂ ಆನ್‌ಲೈನ್‌ನಲ್ಲಿ ನಡೆಯುತ್ತಿವೆ. ಪ್ರವಚನ, ಪೂಜೆಗಳನ್ನು ಅಪಾರ ಸಂಖ್ಯೆಯಲ್ಲಿ ವೀಕ್ಷಿಸುತ್ತಿದ್ದಾರೆ. ಕೆಲವರು ವರ್ಷಂಪ್ರತಿ ಸಲ್ಲಿಸುವ ಸೇವೆಯನ್ನು ಆನ್‌ಲೈನ್ ಮೂಲಕ ಸಲ್ಲಿಸುತ್ತಿದ್ದಾರೆ.
Advertisement
ಕನಕನ ಕಿಂಡಿಯಲ್ಲಿ ಕೃಷ್ಣದರ್ಶನ ಅಬಾಧಿತಸುಮಾರು ಎರಡು ತಿಂಗಳಿಂದ ಶ್ರೀಕೃಷ್ಣ ಮಠದ ಪ್ರವೇಶ ಭಕ್ತರಿಗೆ ಇಲ್ಲವಾದರೂ ಕನಕದಾಸರು ಹಾಕಿಕೊಟ್ಟ ಸಂಪ್ರದಾಯದಂತೆ ದಿನದ 24 ಗಂಟೆಯೂ ಕನಕನ ಕಿಂಡಿ ಮೂಲಕ ದೇವರ ದರ್ಶನ ನಡೆಯುತ್ತಿದೆ. ಸ್ಥಳೀಯರು ಕನಕನ ಕಿಂಡಿ ಮೂಲಕ ದರ್ಶನ ಪಡೆಯುತ್ತಿದ್ದಾರೆ.