ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣಮಠದ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಕೃಷ್ಣ ಮಾಸೋತ್ಸವ ಪ್ರಯುಕ್ತ ಗ್ರಾಮೀಣ ಕ್ರೀಡೆಗಳಿಗೆ ಒತ್ತು ನೀಡುವ ಉದ್ದೇಶದಿಂದ ಆ. 25ರಂದು ಕಬಡ್ಡಿ ಪಂದ್ಯಾಟ ನಡೆಯಿತು.
ಕಬಡ್ಡಿ ಸ್ಪರ್ಧೆಗೆ ಪರ್ಯಾಯ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿಜಯ್ ಭಾರಧ್ವಜ್ ಅವರು ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ವಿಜಯ ಭಾರಧ್ವಜ್, ನಶಿಸಿ ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ ಅದರ ಪುನರುಜ್ಜೀವನ ಅಗತ್ಯತೆ ಇದೆ . ಈ ನಿಟ್ಟಿನಲ್ಲಿ ಮಠದ ಪ್ರಯತ್ನ ಶ್ಲಾಘನೀಯ ಹಾಗೂ ಉಳಿದವರಿಗೂ ಒಂದು ಮಾದರಿ ಎಂದರು.
ಈ ವೇಳೆ ಉಭಯ ಶ್ರೀಪಾದರು ಕಬ್ಬಡಿ ಆಟವಾಡಿದರು. ಶ್ರೀ ಮಠದ ದಿವಾನರಾದ ನಾಗರಾಜ ಆಚಾರ್ಯ, ರಮೇಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು.