Advertisement

Udupi ಶ್ರೀಕೃಷ್ಣಮಠ: ಸಂಭ್ರಮದ ಚೂರ್ಣೋತ್ಸವ

12:54 AM Jan 16, 2024 | Team Udayavani |

ಉಡುಪಿ: ಶ್ರೀಕೃಷ್ಣ ಮಠದಲ್ಲಿ ವಾರ್ಷಿಕವಾಗಿ ಸಪ್ತೋತ್ಸವದ ಮರುದಿನ ನಡೆಯುವ ಚೂರ್ಣೋತ್ಸವ ಹಾಗೂ ಅವಭೃಥ ಸ್ನಾನ ಸೋಮವಾರ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯಿತು.

Advertisement

ಉತ್ಸವದಲ್ಲಿ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಪೇಜಾವರ ಮಠದ ಶ್ರೀವಿಶ್ವ ಪ್ರಸನ್ನತೀರ್ಥ ಶ್ರೀಪಾದರು, ಕಾಣಿ ಯೂರು ಮಠದ ಶ್ರೀ ವಿದ್ಯಾ ವಲ್ಲಭತೀರ್ಥ ಶ್ರೀಪಾದರು, ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು, ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಶೀರೂರು ಮಠದ ಶ್ರೀವೇದ ವರ್ಧನತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು. ಬ್ರಹ್ಮರಥದಲ್ಲಿ ಕೃಷ್ಣ ಮುಖ್ಯಪ್ರಾಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಪರ್ಯಾಯ ಶ್ರೀಪಾದರು ಮಧ್ವಮಂಟಪದಲ್ಲಿ ತೊಟ್ಟಿಲು ಪೂಜೆ ನೆರವೇರಿಸಿ ಅಷ್ಟ ಮಠಾಧೀಶರನ್ನು ಗೌರವಿಸಿದರು. ಅನಂತರ ಮಧ್ವ ಸರೋವರದಲ್ಲಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಉತ್ಸವ ಮೂರ್ತಿಗಳಿಗೆ ಅವಭೃಥ ಸ್ನಾನ ನಡೆಯಿತು. ಭಾರೀ ಜನಸಂದಣಿ ಇದ್ದು ಮಧ್ಯಾಹ್ನ ಸಾವಿರಾರು ಮಂದಿ ಭೋಜನ ಪ್ರಸಾದ ಸ್ವೀಕರಿಸಿದರು.

ಕೃಷ್ಣಾಪುರ ಮಠ ಪರ್ಯಾಯದ ಕೊನೆಯ ಉತ್ಸವ ಇದಾಗಿದ್ದು ಗುರುವಾರ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಪರ್ಯಾಯ ಉತ್ಸವ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next