Advertisement

ಉಡುಪಿ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಇನ್ನೂ 15 ದಿನ ಅವಕಾಶವಿಲ್ಲ

03:11 PM May 28, 2020 | keerthan |

ಉಡುಪಿ: ರಾಜ್ಯದಲ್ಲಿ ಜೂನ್ ಒಂದರಿಂದ ದೇವಸ್ಥಾನಗಳಲ್ಲಿ ಭಕ್ತರು ದೇವರ ದರ್ಶನ ಪಡೆಯಬಹುದು ಎಂದು ಸರ್ಕಾರ ಅವಕಾಶ ನೀಡಿದ್ದರೂ ಉಡುಪಿ ಕೃಷ್ಣ ಮಠದಲ್ಲಿ ಇನ್ನೂ 15 ದಿನಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ ಎಂದು ಪರ್ಯಾಯ ಅದಮಾರು ಮಠ ತಿಳಿಸಿದೆ.

Advertisement

ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯ ತೀರ್ಥರು ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಮುಂದಿನ 10-15 ದಿನದಲ್ಲಿ ಪರಿಸ್ಥಿ ಅವಲೋಕಿಸಿ ನಂತರ ಭಕ್ತರ ದರ್ಶನಕ್ಕೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.

ಇತರ ದೇವಸ್ಥಾನಗಳಲ್ಲಿ ದೇವರ ದರ್ಶನ ವ್ಯವಸ್ಥೆ ಕಲ್ಪಿಸಿದರೂ, ಶ್ರೀಕೃಷ್ಣ ಮಠದಲ್ಲಿ ಅಷ್ಟ ಮಠದ ಯತಿಗಳೇ ಪೂಜೆ ನಡೆಸುವ ಕ್ರಮ ಇದೆ. ಹಾಗಾಗಿ ಒಳಗಿನವರಿಗೆ ಏನಾದರೂ ತೊಂದರೆ ಆದರೆ ಪದ್ಧತಿಗೆ ಭಂಗ ಬರುವಂತಹ ಸಂದರ್ಭಗಳು ಇರುತ್ತವೆ. ಹಾಗಾಗಿ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಕೋವಿಡ್-19 ಸೋಂಕಿನ ಕಾರಣದಿಂದ ದೇವಸ್ಥಾನಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿತ್ತು. ರಾಜ್ಯದಲ್ಲಿ ಲಾಕ್ ಡೌನ್ ಬಹಳಷ್ಟು ಮುಕ್ತವಾಗಿರುವ ಕಾರಣ ಜೂನ್ ಒಂದರಿಂದ ದೇವಸ್ಥಾನಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next