ಉಡುಪಿ: ಉಡುಪಿ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಉಡುಪಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಖುದ್ದಾಗಿ ಹಾಜರಾಗಿದ್ದಾರೆ.
ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.
ಒಂದನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಅವರು ತೀರ್ಪು ನೀಡಿದ್ದಾರೆ. ಮೂವರು ವಿದ್ಯಾರ್ಥಿನಿಯರ ಪರವಾಗಿ ನ್ಯಾಯವಾದಿ ಅಸದುಲ್ಲ ವಾದಿಸಿದರು.
ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ ಪೊಲೀಸ್ ಭದ್ರತೆಯ ನಡುವೆ ಶುಕ್ರವಾರ ಆರಂಭವಾಗಿದೆ.
ಇದನ್ನೂ ಓದಿ: ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ: ಕೋಟ ಶ್ರೀನಿವಾಸ ಪೂಜಾರಿ