Advertisement

Udupi: ಭದ್ರತೆ ದೃಷ್ಟಿಯಿಂದ ಪ್ರಕರಣ ಉನ್ನತ ಮಟ್ಟದ ತನಿಖೆ ವಹಿಸಿ: ಶಾಸಕ ಯಶ್‌ಪಾಲ್‌ ಸುವರ್ಣ

01:33 AM Oct 13, 2024 | Team Udayavani |

ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಗೃಹ ಇಲಾಖೆಗೆ ಶಾಸಕ ಯಶ್‌ಪಾಲ್‌ ಸುವರ್ಣ ಆಗ್ರಹಿಸಿದ್ದಾರೆ.

Advertisement

ಏಷ್ಯಾದ ಅತಿ ದೊಡ್ಡ ಮೀನುಗಾರಿಕೆ ಬಂದರಾಗಿ ಗುರುತಿಸಿಕೊಂಡಿರುವ ಮಲ್ಪೆಯಲ್ಲಿ ಕೆಲಸಕ್ಕಾಗಿ ಬಂದು ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಅಕ್ರಮ ವಲಸಿಗರಿಗೆ ಸಹಕರಿಸಿದವರನ್ನು ಪೊಲೀಸರು ತತ್‌ಕ್ಷಣ ಬಂಧಿಸಿ ವಿಚಾರಣೆ ನಡೆಸಬೇಕಿದೆ. ಶಿಕ್ಷಣ, ಮೀನುಗಾರಿಕೆ, ಆರೋಗ್ಯ, ಪ್ರವಾಸೋದ್ಯಮ, ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಉಡುಪಿಯಲ್ಲಿ ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವುದು ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿಸಿದ್ದು, ಈ ಜಾಲದ ಹಿಂದಿರುವ ಕಾಣದ ಕೈಗಳನ್ನು ತತ್‌ಕ್ಷಣ ಹೆಡೆಮುರಿ ಕಟ್ಟುವ ಕೆಲಸ ಪೊಲೀಸ್‌ ಇಲಾಖೆ ನಡೆಸಿ ಜನಸಾಮಾನ್ಯರಲ್ಲಿ ವಿಶ್ವಾಸ ಮೂಡಿಸಬೇಕಾಗಿದೆ.

ನಕಲಿ ಆಧಾರ್‌ ಕಾರ್ಡ್‌ ಮತ್ತು ಪಾಸ್‌ ಪೋರ್ಟ್‌ ಮಾಡಿ ಅಕ್ರಮವಾಗಿ ದೇಶದೊಳಗೆ ಕಳುಹಿಸುವ ಜಾಲವನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಈ ಬಗ್ಗೆ ರಾಷ್ಟ್ರೀಯ ತನಿಖಾ ದಳದ ಮೂಲಕವೂ ತನಿಖೆ ನಡೆಸುವ ಬಗ್ಗೆಯೂ ಕೇಂದ್ರ ಸರಕಾರಕ್ಕೆ ಮನವಿ ಮಾಡುವುದಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next