Advertisement
ಆಸ್ಪತ್ರೆ ನಿರ್ಮಾಣಕ್ಕೆ ವಾರಂಬಳ್ಳಿಯಲ್ಲಿ ಮೀಸಲಿಟ್ಟಿರುವ ಸುಮಾರು 6 ಎಕ್ರೆ ಜಾಗಕ್ಕೆ ಬುಧವಾರ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ, ಅನಂತರ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳ ಸಭೆ ನಡೆಸಿದರು.
Related Articles
Advertisement
ವಿಶ್ವಕರ್ಮ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಸದರ ಸೂಚನೆಮಣಿಪಾಲ: ಸ್ವೋದ್ಯೋಗಕ್ಕೆ ಅನುಕೂಲ ಮಾಡಿಕೊಡುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಜಾರಿ ಮಾಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿದ ಸಭೆಯಲ್ಲಿ ಮಾತನಾಡಿದ ಅವರು, ಪಿಎಂ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ 15,380 ಅರ್ಜಿ ಸಲ್ಲಿಕೆಯಾಗಿದ್ದು, ಅದರಲ್ಲಿ 13,238 ಅರ್ಜಿಗಳನ್ನು ಜಿಲ್ಲಾ ಸಮಿತಿ ಪರಿಶೀಲಿಸಿ ರಾಜ್ಯಕ್ಕೆ ಕಳುಹಿಸಿದೆ. 7,750 ಅರ್ಜಿ ರಾಜ್ಯ ಹಂತದಲ್ಲಿ ಪರಿಶೀಲನೆಗೆ ಒಳಪಟ್ಟು 6,611 ಅರ್ಜಿ ಅನುಮೋದನೆಗೊಂಡಿದೆ. 2,209 ಫಲಾನುಭವಿಗಳು ಈಗಾಗಲೇ ತರಬೇತಿಯನ್ನು ಪಡೆದಿದ್ದಾರೆ ಎಂದರು. ವಿಶ್ವಕರ್ಮ ಯೋಜನೆ ಬಗ್ಗೆ ತರಬೇತಿ ನೀಡಲು ಗುರುತಿಸಿರುವ 11 ಕೇಂದ್ರಗಳಲ್ಲಿ 7 ಕೇಂದ್ರಗಳು ಇನ್ನೂ ಆರಂಭವಾಗಿಲ್ಲ. ಇವುಗಳನ್ನು ಸೆ.10ರೊಳಗೆ ಆರಂಭಿಸಬೇಕು ಎಂದು ನಿರ್ದೇಶನ ನೀಡಿದರು. ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕೊಡ್ಗಿ ಯೋಜನೆಯ ನಾಮನಿರ್ದೇಶಿತ ಸದಸ್ಯರಾದ ಶ್ರೀನಿಧಿ ಹೆಗ್ಡೆ, ಸುರೇಂದ್ರ ಪಣಿಯಾಡಿ, ಜಿಪಂ ಸಿಇಒ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್., ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ್, ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಮೊದಲಾದವರು ಉಪಸ್ಥಿತರಿದ್ದರು.