ಗ್ರೂಪ್‌ನವರಿಂದ ತೆರೆಯಲಾದ ಸಾಂಪ್ರದಾಯಿಕ ತಿಂಡಿ-ತಿನಿಸುಗಳು ಹಾಗೂ ಕರಕುಶಲ ವಸ್ತುಗಳ ಮಳಿಗೆ “ಉಡುಪಿ ಸ್ಟೋರ್’ನ ಉದ್ಘಾಟನೆ ಶುಕ್ರವಾರ ನಡೆಯಿತು.
Advertisement
ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಿ, ಉಡುಪಿಯ ಆಹಾರೋತ್ಪನ್ನಗಳಿಗೆ ಎಲ್ಲ ಕಡೆ ಬೇಡಿಕೆಯಿದೆ. ಸಮಾಜಕ್ಕೆ ಶುಚಿ-ರುಚಿಯಾದ ಗುಣಮಟ್ಟದ ಆರೋಗ್ಯಪೂರ್ಣ ಆಹಾರವನ್ನುಒದಗಿಸುವ ಮಹದಾಸೆಯಿಂದ ಆರಂಭಿಸಲ್ಪಟ್ಟ ಈ ಮಳಿಗೆ ಯಶಸ್ವಿಯಾಗಲಿದೆ ಎಂದು ಹಾರೈಸಿದರು.
Related Articles
ನಿರ್ದೇಶಕ ದಿವಾಕರ ಸನಿಲ್ ಸ್ವಾಗತಿಸಿದರು. ದಯಾನಂದ ಉಗ್ಗೇಲ್ ಬೆಟ್ಟು ನಿರೂಪಿಸಿ, ವಂದಿಸಿದರು.
Advertisement
ಸಾಂಪ್ರದಾಯಿಕತೆ ಒತ್ತುವಿ21 ಗ್ರೂಪ್‌ನ ಉಡುಪಿಯ ಮೊದಲ ಮಳಿಗೆಯಲ್ಲಿ ಉಡುಪಿಯ ಸಾಂಪ್ರದಾಯಿಕ ವಿಶೇಷ ತಿಂಡಿ ತಿನಿಸುಗಳು, ಹಲವು ಬಗೆಯ ಉಪ್ಪಿನಕಾಯಿ, ಚಟ್ನಿ ಪುಡಿ, ಮಸಾಲೆ ಹುಡಿ, ಹಪ್ಪಳಗಳು, ಸ್ಕ್ವಾಷ್ ಮತ್ತು ಸಿರಪ್‌ಗ್ಳು, ಎಲ್ಲ ತರಹದ ಬೇಕರಿ ಉತ್ಪನ್ನಗಳು, ದಿನಸಿ ಸಾಮಗ್ರಿಗಳು ಹಾಗೂ ಉಡುಪಿಯ ಸಾಂಪ್ರದಾಯಿಕ ಕರಕುಶಲ ವಸ್ತುಗಳು, ಹಲವು ಬಗೆಯ ಆಲಂಕಾರಿಕ ವಸ್ತುಗಳು ಲಭ್ಯವಿವೆ. ಜಿಲ್ಲೆಯಲ್ಲಿ ಈಗಾಗಲೇ ಸಾಂಪ್ರದಾಯಿಕ ತಿಂಡಿ-ತಿನಿಸುಗಳು ಮತ್ತು ಕರಕುಶಲ ವಸ್ತುಗಳ ತಯಾರಿಯಲ್ಲಿ ಪ್ರಾವೀಣ್ಯ ಗಳಿಸಿರುವ ವಿ21 ಗ್ರೂಪ್ ಉಡುಪಿ ಬ್ರ್ಯಾಂಡ್ ನ ತಿಂಡಿ-ತಿನಿಸುಗಳನ್ನು ಇನ್ನಷ್ಟು ಪ್ರಚಾರಗೊಳಿಸುವ ಉದ್ದೇಶ ಹೊಂದಲಾಗಿದೆ.