Advertisement

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

10:49 PM Dec 27, 2024 | Team Udayavani |

ಉಡುಪಿ: ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿರುವ ಕಾರಣ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.

Advertisement

ಸಾರ್ವಜನಿಕರು ನಾಳೆ ಡಿ. 28ರಿಂದ 4 ಗಂಟೆಯಿಂದ ಜನವರಿ 1 ರ ರಾತ್ರಿ 9 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಸಹಕರಿಸಲು ಪೊಲೀಸ್ ಇಲಾಖೆ ಕೋರಿದೆ.

ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸಬೇಕು.

ಕಲ್ಸಂಕ ವೃತ್ತ
ಗುಂಡಿಬೈಲು ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುಬೇಕು.

ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ್ ಕಡೆ ಹೋಗುವವರು ಸಿಟಿ ಬಸ್ ನಿಲ್ದಾಣದ ಹತ್ತಿರ ತಿರುಗಿಸಿಕೊಂಡು ಬರಬೇಕು.

Advertisement

ಕರಾವಳಿ ಜಂಕ್ಷನ್

ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರು (ಆಭರಣ ಮೋಟರ್ಸ್ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರುಬೇಕು

ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು‌ ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರು (ಆಭರಣ ಮೋಟರ್ಸ್) ಎದುರು ತಿರುಗಿಸಿ ಉಡುಪಿಗೆ ಬರುಬೇಕು.

ಮಲ್ಪೆ
ಮಲ್ಪೆ ಬೀಚ್ ಕಡೆಯಿಂದ ಬರುವವರು ಬಲರಾಮ ಸರ್ಕಲ್ ನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ ಸೇರಬೇಕು.

Advertisement

Udayavani is now on Telegram. Click here to join our channel and stay updated with the latest news.

Next