Advertisement
ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿ ತಂತ್ರಜ್ಞಾನದ ಬಳಕೆಯಿಂದ ಕಕ್ಷಿದಾರರಿಗೆ ಸಮಯ ಮತ್ತು ಹಣದ ಉಳಿತಾಯವೂ ಸಾಧ್ಯವಾಗಲಿದೆ. ವಿಳಂಬ ನ್ಯಾಯದಾನದ ಹಿನ್ನೆಲೆಯಲ್ಲಿ ನ್ಯಾಯಾಲಯಗಳಲ್ಲಿ ವ್ಯಾಜ್ಯಗಳ ವಿಲೇವಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯಸ್ಥಿಕೆಯ ತೀರ್ಮಾನ ಮತ್ತು ಲೋಕ ಅದಾಲತ್ ಮೂಲಕ ಸಾಧ್ಯವಾದಷ್ಟು ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು. ಕೋರ್ಟ್ ಕಲಾಪಗಳನ್ನು ಲೈವ್ ನೋಡುವಂತಾಗಬೇಕು ಎಂದರು.
Related Articles
Advertisement
ಆರೋಗ್ಯ ಕಾರ್ಡ್ ಬಿಡುಗಡೆಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಉಡುಪಿ ವಕೀಲರ ಸಂಘದ ಸದಸ್ಯರಿಗೆ ನೀಡಲಾಗುವ ವಿಶಿಷ್ಟ ಆರೋಗ್ಯ ಕಾರ್ಡ್ ಅನ್ನು ಮಾಹೆ ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಸಮ್ಮುಖದಲ್ಲಿ ನ್ಯಾ| ಎಸ್.ವಿ. ಅಂಜಾರಿಯಾ ಬಿಡುಗಡೆ ಮಾಡಿದರು. ಅಡ್ವೊಕೇಟ್ ಜನರಲ್ ಶಶಿಕಿರಣ್ ಎಸ್. ಶೆಟ್ಟಿ, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್, ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಉಪಸ್ಥಿತರಿದ್ದರು. ವಿವಿಧ ವಿಚಾರಗಳಲ್ಲಿ ವಿಚಾರ ಮಂಡನೆ ನಡೆಯಿತು. ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಎ.ಆರ್. ವಂದಿಸಿದರು. ಶತಮಾನೋತ್ತರ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪ್ರಸ್ತಾವನೆಗೈದರು. ಹಿರಿಯ ವಕೀಲೆ ಮೇರಿ ಶ್ರೇಷ್ಠ ನಿರೂಪಿಸಿದರು. ಬಾಕಿ ಪ್ರಕರಣಗಳಿಂದ ಜನರಲ್ಲಿ ಅಶಾಂತಿ: ನ್ಯಾ| ನಝೀರ್
ಆಂಧ್ರಪ್ರದೇಶದ ರಾಜ್ಯಪಾಲ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನ್ಯಾ| ಎಸ್. ಅಬ್ದುಲ್ ನಝೀರ್ ಅವರು ನ್ಯಾಯಾಧೀಕರಣ ಪ್ರಕ್ರಿಯೆಯಲ್ಲಿ ವ್ಯಾಜ್ಯಗಳ ಮುಂದೂಡಿಕೆ ಅನಿವಾರ್ಯ ಎಂದರು. ಸುಪ್ರೀಂ ಕೋರ್ಟ್ವೊಂದರಲ್ಲಿಯೇ ಪ್ರಸ್ತುತ ಸುಮಾರು 5 ಕೋಟಿ ಪ್ರಕರಣಗಳು ವಿಚಾರಣೆಗೆ ಬಾಕಿ ಇದೆ. ಅದರಿಂದ ಸುಮಾರು 25 ಕೋಟಿ ಮಂದಿ ಅಶಾಂತಿಗೆ ಒಳಗಾಗುತ್ತಿದ್ದಾರೆ. ನ್ಯಾಯದಾನ ವಿಳಂಬವನ್ನು ಗಂಭೀರವಾಗಿ ಪರಿಗಣಿಸಿ, ಕ್ಷಿಪ್ರ ನ್ಯಾಯದಾನ ಪ್ರಕ್ರಿಯೆ ಬಗ್ಗೆ ಕಾನೂನು ಸಚಿವರ ಸಹಿತ ನ್ಯಾಯಾಧೀಶರು ಮತ್ತು ನ್ಯಾಯವಾದಿಗಳು ಪರಿಹಾರೋಪಾಯ ಮಾರ್ಗ ಕಂಡುಕೊಳ್ಳುವ ಅನಿವಾರ್ಯತೆಯಿದೆ ಎಂದರು.