Advertisement
ಜಿಲ್ಲಾಡಳಿತ, ಜಿ.ಪಂ. ವತಿಯಿಂದ ಎಂಜಿಎಂ ಕಾಲೇಜು ಮೈದಾನದಲ್ಲಿ ಬುಧವಾರ ಹಮ್ಮಿ ಕೊಂಡಿದ್ದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶ, ಜಿಲ್ಲೆಯ ವಿವಿಧ ಕಾಮ ಗಾರಿಗಳನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಿಂದ 4.30 ಲಕ್ಷ ಕೋಟಿ ರೂ.ಗಳನ್ನು ತೆರಿಗೆ ರೂಪದಲ್ಲಿ ನೀಡಿದರೆ, ರಾಜ್ಯಕ್ಕೆ ಮರಳಿ ಬರುವುದು ಕೇವಲ 50,257 ಕೋಟಿ ರೂ. ಮಾತ್ರ. ಪ್ರಧಾನಿ ಮೋದಿ ಕಾಲದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದ್ದು, ಇಲ್ಲಿನ ಸಂಸದೆ ಶೋಭಾ ಕರಂದ್ಲಾಜೆ ಈ ಬಗ್ಗೆ ಎಂದೂ ಕೇಂದ್ರವನ್ನು ಪ್ರಶ್ನಿಸಿಲ್ಲ. ಇಂತಹ ಸಂಸದರನ್ನು ಇಲ್ಲಿನ ಜನ ಮರು ಆಯ್ಕೆ ಮಾಡಬೇಕೆ? ಅಚ್ಛೇ ದಿನ್ ಆಯೆಂಗೆ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದ ಪ್ರಧಾನಿ ಮೋದಿಯವರು ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದಿಲ್ಲ ಎಂದು ಟೀಕಿಸಿದರು.
Related Articles
Advertisement
ಮೋದಿಯವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟಿಸಿದರೆ ಅಂದೇ ರಾಜ್ಯದಲ್ಲಿ ನಾನು ಆಂಜ ನೇಯ ದೇಗುಲ ಉದ್ಘಾಟಿಸಿದೆ. ಇಲ್ಲಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ 100 ಕೋ.ರೂ. ಅನುದಾನವನ್ನು ಮೀಸಲಿಟ್ಟಿದ್ದೇವೆ. ಆದರೂ ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಮೂದಲಿಸುತ್ತಾರೆ. ಈ ರೀತಿ ಜನರ ದಾರಿ ತಪ್ಪಿಸಿ ಅಧಿಕಾ ರಕ್ಕೆ ಬರುತ್ತಿರುವ ಬಿಜೆಪಿಗೆ ಗೋಬ್ಯಾಕ್ ಎಂದು ಹೇಳಬೇಕು. ಹಾಗೆ ಹೇಳಲು ಇದು ಸಕಾಲ ಎಂದು ಜನರಿಗೆ ಕರೆ ನೀಡಿದರು.
ಅಭಿವೃದ್ಧಿಗೆ ಬದ್ಧ: ವೈದ್ಯಕೇಂದ್ರ ಸರಕಾರ ಮೀನು ಗಾರರ ಡೀಸೆಲ್ ಸಬ್ಸಿಡಿ ನಿಲ್ಲಿಸಿದೆ. ಆದರೆ ನಾವು ನಾಡದೋಣಿಗಳಿಗೆ ಸೀಮೆ ಎಣ್ಣೆ ನೀಡುತ್ತಿದ್ದು, ಬಜೆಟ್ ನಲ್ಲಿ ಮೀನುಗಾರಿಕೆಗೆ 3 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದೇವೆ. ಕರಾವಳಿ ಜಿಲ್ಲೆಗಳ ಮೇಲೆ ಕಾಳಜಿಯಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೈಗೊಳ್ಳುವುದಾಗಿ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಹೇಳಿದರು.