Advertisement

ಉಡುಪಿ: ತ್ರಿಶಾ ವಿದ್ಯಾ ಕಾಲೇಜು-ವಾರ್ಷಿಕೋತ್ಸವ

03:56 PM Jun 18, 2024 | Team Udayavani |

ಉಡುಪಿ: ಕರಾವಳಿ ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ತ್ರಿಶಾ ಕಾಲೇಜ್‌ ಆಫ್ ಕಾಮರ್ಸ್‌ ಆ್ಯಂಡ್‌ ಮ್ಯಾನೇಜ್‌ ಮೆಂಟ್‌ ಮತ್ತು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವವು ಕಟಪಾಡಿ ಅಗ್ರಹಾರದ ಕಾಳಿಕಾಂಬಾ ವಿಶ್ವಕರ್ಮೇಶ್ವರ ಸಭಾಭವನದಲ್ಲಿ ನಡೆಯಿತು.

Advertisement

ಯುಕೆ ಆ್ಯಂಡ್‌ ಕೋ.ಕಂಪೆನಿಯ ಸ್ಥಾಪಕ ಕೆ. ಉಲ್ಲಾಸ್‌ ಕಾಮತ್‌ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣ ಮುಗಿಸಿ ಬೇರೆಯವರಿಗೆ ಸ್ವೋದ್ಯೋಗ ನೀಡುವವರಾಗಬೇಕು. ಹೊಸ ಯೋಜನೆ ಕಠಿನ ನಿರ್ಧಾರಗಳಿಂದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಬೇಕು. ಇವೆಲ್ಲದಕ್ಕೂ ಅವರು ಅಳವಡಿಸಿಕೊಂಡ ಕೌಶಲಗಳೇ ದಾರಿ ತೋರಿಸುತ್ತವೆ ಎಂದು ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಗೋಪಾಲಕೃಷ್ಣ ಭಟ್‌ ಸಾಧನೆಗೈದ ವಿದ್ಯಾರ್ಥಿಗಳನ್ನು
ಅಭಿನಂದಿಸಿದರು. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ
ಗೌರವಿಸಲಾಯಿತು. ಸಾಧನೆಗೈದ ಹಿರಿಯ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.

ಸಿದ್ಧಾಂತ್‌ ಫೌಂಡೇಶನ್‌ನ ಟ್ರಸ್ಟಿ ನಮಿತಾ ಜಿ. ಭಟ್‌, ರಾಮ ಪ್ರಭು, ತ್ರಿಶಾ ವಿದ್ಯಾ ಕಾಲೇಜ್‌ ಆಫ್ ಕಾಮರ್ಸ್‌ ಆ್ಯಂಡ್‌ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲ ಪ್ರೊ| ನಾರಾಯಣ ರಾವ್‌, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ
ಪ್ರೊ| ವಿಘ್ನೇಶ್‌ ಶೆಣೈ ಉಪಸ್ಥಿತರಿದ್ದರು.

ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ನಿಧಿ ಎನ್‌. ಪೈ ಸ್ವಾಗತಿಸಿ, ಪ್ರೊ| ರೆನಿಟಾ ವಂದಿಸಿದರು. ಅಂತಿಮ ಬಿಕಾಂನ ವಿದ್ಯಾರ್ಥಿಗಳಾದ ಸುಹಾನ್‌ ಶೆಟ್ಟಿ, ಲೆರಿನಾ ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಬಗೆಯ ಸಂಸ್ಕೃತಿಕ ಕಾರ್ಯಕ್ರಮಗಳು
ಜರಗಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next