Advertisement

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

01:54 AM Oct 10, 2024 | Team Udayavani |

ಕಾಪು: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆಯುತ್ತಿರುವ ಮೂರನೇ ವರ್ಷದ ಉಡುಪಿ ಉಚ್ಚಿಲ ದಸರಾ 2024ರ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಳ್ಳುತ್ತಿವೆ.

Advertisement

ಸ್ಥಳೀಯರಿಂದ ಹಿಡಿದು ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದ ಕಲಾವಿದರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಪ್ರಸಿದ್ಧ ಕಲಾವಿದರ ಯಕ್ಷಗಾನ, ನೃತ್ಯ ರೂಪಕ, ನೃತ್ಯ ವೈವಿಧ್ಯ, ಹರಿಕಥೆ ಸಹಿತ ಕಲೆ ಮತ್ತು ಸಂಸ್ಕೃತಿಯ ಕಾರ್ಯಕ್ರಮಗಳಿಗೆ ಉತ್ತಮ ಸ್ಪಂದನೆ ದೊರೆತಿದೆ.

ತುಳುನಾಡಿನ ಧಾರ್ಮಿಕ ಸಂಸ್ಕೃತಿಯನ್ನು ಉಳಿಸುವಲ್ಲಿ ನಡೆಸಿ ರುವ ಸಾಮೂಹಿಕ ಕುಣಿತ ಭಜನೆ, ನಿತ್ಯ ಭಜನಾ ಕಾರ್ಯಕ್ರಮ, ಶರನ್ನ ವರಾತ್ರಿಯ ಪರಂಪರೆಯನ್ನು ಮೆರೆ ಯುವ ದಾಂಡಿಯಾ ಮತ್ತು ಗರ್ಬಾ ನೃತ್ಯಗಳಲ್ಲೂ ಜನರು ಪಾಲ್ಗೊಂಡಿದ್ದಾರೆ.

ಉಪ್ಪಳದಿಂದ ಶೀರೂರುವರೆಗಿನ ಮೊಗವೀರ ಸಮಾಜದ ವಿವಿಧ ಸಂಘ-ಸಂಸ್ಥೆಗಳು, ಯುವ ಸಂಘಟನೆ, ಮಹಾಸಭಾ ಮತ್ತು ಮಹಿಳಾ ಸಭಾದ ಸದಸ್ಯರೂ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿರುವುದು ವಿಶೇಷ.

ಅಜಯ್‌ ವಾರಿಯರ್‌ ಸಂಗೀತ
ಅ. 11ರಂದು ಮಹಾನವಮಿಯಂದು ಸಂಜೆ 6.30ಕ್ಕೆ ಕಲಾಮೃತ ಮಂಗಳೂರು ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8 ಕ್ಕೆ ಹಿನ್ನೆಲೆ ಗಾಯಕ ಅಜಯ್‌ ವಾರಿಯರ್‌ ಬೆಂಗಳೂರು ಮತ್ತು ತಂಡದಿಂದ ಸಂಗೀತ ರಸ ಸಂಜೆ ಇರಲಿದೆ.

Advertisement

ಮನರಂಜಿಸಿದ ಹೆಣ್ಮಕ್ಕಳ ಹುಲಿ ಕುಣಿತ ಮತ್ತು ಕುಸ್ತಿ ಸ್ಪರ್ಧೆ
ಪ್ರಥಮ ಬಾರಿಗೆ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯು ಕರಾವಳಿಯ ಇತಿಹಾಸದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ, ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆ, ಹೆಣ್ಣು ಮಕ್ಕಳ ಹುಲಿ ಕುಣಿತ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಸಾಮೂಹಿಕ ದಾಂಡಿಯಾ ನೃತ್ಯ, ವಿಸ್ಮಯ ಜಾದೂ, ಶತವೀಣಾವಲ್ಲರಿ ಹೆಚ್ಚಿನ ಜನಾಕರ್ಷಣೆಗೆ ಕಾರಣವಾಗಿದೆ.

ಇಂದಿನ ಕಾರ್ಯಕ್ರಮ
ಅ. 10ರಂದು ಬೆಳಿಗ್ಗೆ 9 ಗಂಟೆಗೆ ನಿತ್ಯ ಚಂಡಿಕಾಹೋಮ, 9.30ರಿಂದ ಭಜನೆ, 12 ಗಂಟೆಗೆ ನವದುರ್ಗೆಯರು, ಶಾರದಾ ಮಾತೆಗೆೆ ಮಹಾ ಮಂಗ ಳಾರತಿ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ. ಸಂಜೆ 5 ಕ್ಕೆ ಭಾಗ್ಯಶ್ರೀ ಐತಾಳ್‌ ಅವರ ಪ್ರವಚನ, 5.45ರಿಂದ 6.15ರವರೆಗೆ ಸಾಮೂಹಿಕ ಕುಂಕುಮಾರ್ಚನೆ, ಸಂಜೆ 6.30ರಿಂದ 7.30ರ ತನಕ ಮಂಗ ಳೂರಿನ ಕೀರ್ತನಕಾರ ಡಾ| ಎಸ್‌. ಪಿ. ಗುರುದಾಸ್‌ ಅವರಿಂದ “ಲಕ್ಷ್ಮೀ ಕಲ್ಯಾಣ’ ಹರಿಕಥೆ, 7.30ರಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next