Advertisement
ಜು. 19ರಂದು ಆರೋಪಿಗಳಾದ ರಾಬಿಯಾ ಬಾನು ಮತ್ತು ಖಾಲಿದ್ ಸಯ್ಯದ್ ಅವರಿಗೆ ಹೆಣ್ಣು ಮಗು ಜನಿಸಿತ್ತು. ಆದರೆ ಆ ಮಗು ಅವರ ವಶದಲ್ಲಿ ಇಲ್ಲದಿರುವ ಬಗ್ಗೆ ಆ. 6ರಂದು ಪೆರಂಪಳ್ಳಿಯ ಅಂಗನವಾಡಿ ಕಾರ್ಯಕರ್ತೆ ಸರಿತಾ ಡಿ’ಸೋಜಾ ಅವರು ಮಕ್ಕಳ ರಕ್ಷಣ ಘಟಕಕ್ಕೆ ಮಾಹಿತಿ ನೀಡಿದ್ದರು.ಅನಂತರ ಮಕ್ಕಳ ರಕ್ಷಣ ಘಟಕದ ಸಾಮಾಜಿಕ ಕಾರ್ಯಕರ್ತರಾದ ಸುರಕ್ಷಾ, ಯೋಗೀಶ್ ಹಾಗೂ ಸರಿತಾ ಡಿ’ಸೋಜಾ ಅವರು ಪೆರಂಪಳ್ಳಿಯ ಶೀಂಬ್ರ ಭಟ್ರಕೋಡಿಯಲ್ಲಿರುವ ಆರೋಪಿಗಳ ಮನೆಗೆ ಭೇಟಿ ನೀಡಿದ್ದು, ಈ ವೇಳೆ ಮನೆಗೆ ಬೀಗ ಹಾಕಲಾಗಿತ್ತು. ಖಾಲಿದ್‌ಗೆ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಸುರಕ್ಷಾ ಅವರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆ.7ರಂದು ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದರು.