Advertisement

Udupi; ಗೀತಾಮೃತಸಾರ ಮರುಮುದ್ರಿತ ಕೃತಿ ಅನಾವರಣ

08:31 AM Dec 18, 2024 | Team Udayavani |

ಉಡುಪಿ: ಪರ್ಯಾಯ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದಿಂದ ನಡೆಯುತ್ತಿರುವ ಬೃಹತ್‌ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಗುರುಗಳಾದ ಶ್ರೀ ಸುಜ್ಞಾನೇಂದ್ರತೀರ್ಥ ಶ್ರೀಪಾದರು ಬರೆದ ಆಚಾರ್ಯ ಮಧ್ವರ ಗೀತಾ ಭಾಷ್ಯವನ್ನಾಧರಿಸಿ 1961ರಲ್ಲಿ ಪ್ರಕಟವಾಗಿದ್ದ ಅಪೂರ್ವ ಕೃತಿ ‘ಗೀತಾಮೃತಸಾರ’ದ ಮರುಮುದ್ರಿತ ಕೃತಿಯನ್ನು ಮಂಗಳವಾರ ಅನಾವರಣಗೊಳಿಸಿದರು.

Advertisement

ಬಳಿಕ ಆಶೀರ್ವಚನ ನೀಡಿದ ಶ್ರೀಪಾದರು, ಶ್ರೀಸುಜ್ಞಾನೇಂದ್ರತೀರ್ಥ ಶ್ರೀಪಾದರ ಜ್ಞಾನ, ಅಧ್ಯಯನ, ಆಯುರ್ವೇದದ ಬಗ್ಗೆ ಅವರು ಹೊಂದಿದ್ದ ಜ್ಞಾನದ ಬಗ್ಗೆ ಸ್ಮರಿಸಿದರು. ಶ್ರೀ ಸುಜ್ಞಾನೇಂದ್ರತೀರ್ಥರ ಪೂರ್ವಾಶ್ರಮದ ಬಂಧು, ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ| ನಿ.ಬೀ.ವಿಜಯ ಬÇÉಾಳ್‌ ಅವರಿಗೆ “ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ’ ನೀಡಿ ಗೌರವಿ ಸ ಲಾ ಯಿ ತು. ವೈದ್ಯನಾಗಿ ಶ್ರೀ ಸುಜ್ಞಾನೇಂದ್ರತೀರ್ಥ ಶ್ರೀಪಾದರ ಶುಶ್ರೂಷೆ ಮಾಡುವ ಅವಕಾಶ ಪಡೆದಿದ್ದುದನ್ನು ಸ್ಮರಿಸಿದ ಡಾ| ಬÇÉಾ ಳ್‌, ಆ ಸಂದರ್ಭದಲ್ಲಿ ಶ್ರೀಗಳು ಶ್ರೀಸುಗುಣೇಂದ್ರತೀರ್ಥ ಶ್ರೀಪಾದರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದರು ಎಂದು ಹೇಳಿದರು.

ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು. ಅನೇಕ ವಿದ್ಯಾರ್ಥಿಗಳಿಗೆ ಗೀತಾಪಾಠ ನಡೆಸಿದ ಡಾ| ರಾಮಕೃಷ್ಣ ರಾಮಚಂದ್ರ ಸೂರಿ ಅವರಿಗೆ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಲಾಯಿತು. ಶ್ರೀಸುಜ್ಞಾನೇಂದ್ರತೀರ್ಥ ಶ್ರೀಪಾದರ ಪೂರ್ವಾಶ್ರಮದ ವಂಶಸ್ಥರಾದ ಹೆಜಮಾಡಿ ಸುಧೀಂದ್ರ ಆಚಾರ್ಯ ಉಪನ್ಯಾಸ ನೀಡಿದರು.

ಪುಸ್ತಕದ ಸಂಪಾದನೆಗೈದ ಓಂಪ್ರಕಾಶ ಭಟ್‌ ಕೃತಿ ಹಾಗೂ ಕೃತಿಕಾರರ ಬಗ್ಗೆ ವಿವರಿಸಿದರು. ಶ್ರೀಮಠದ ಮಹಿತೋಷ ಆಚಾರ್ಯ ಸ್ವಾಗತಿಸಿ, ನಿರೂಪಿಸಿದರು. ಮಠದ ದಿವಾನರಾದ ನಾಗರಾಜ ಆಚಾರ್ಯ ಮತ್ತು ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ  ಉಪಸ್ಥಿತರಿದ್ದರು.

ಇಂದು ಗೀತೋತ್ಸವದಲ್ಲಿ ಹಾಸ್ಯೋತ್ಸವ
ಡಿ.18ರ ಸಂಜೆ 5ರಿಂದ ರಾಜಾಂಗಣದಲ್ಲಿ ಗಂಗಾವತಿ ಪ್ರಾಣೇಶ್‌, ನರಸಿಂಹ ಜೋಷಿ, ಬಸವರಾಜ ಮಹಾ ಮನಿ ಅವರಿಂದ ಹಾಸ್ಯೋತ್ಸವ ನಡೆಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next