Advertisement

Udupi; ಹಿರಿಯ ಪತ್ರಕರ್ತ ಶಶಿಧರ ಹೆಮ್ಮಣ್ಣ ನಿಧನ

03:50 PM Nov 10, 2023 | Team Udayavani |

ಉಡುಪಿ: ಹಿರಿಯ ಪತ್ರಕರ್ತ ಶಶಿಧರ ಹೆಮ್ಮಣ್ಣ (57) ಅವರು ಗುರುವಾರ ರಾತ್ರಿ ಅಸುನೀಗಿದ್ದಾರೆ. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

ಕುಂದಪ್ರಭ ಪತ್ರಿಕೆಯ ಮೂಲಕ 1991 ರಲ್ಲಿ ವೃತ್ತಿ ಜೀವನ ಅರಂಭಿಸಿದ ಶಶಿಧರ್ ಹೆಮ್ಮಣ್ಣ ಅವರು ಕ್ಷಿತಿಜ ಎನ್ನುವ ಸ್ವಂತ ವಾರಪತ್ರಿಕೆ ಆರಂಭಿಸಿದ್ದರು. ಬಳಿಕ ಈ ಟಿವಿ ಕನ್ನಡ, ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.

ಗುರವಾರ ಬೆಳಗ್ಗೆ ಅವರಿಗೆ ಉಡುಪಿಯ ಮನೆಯಲ್ಲಿದಾಗ ದಿಢೀರಾಗಿ ಎದೆನೋವು ಕಾಣಿಸಿಕೊಂಡಿತ್ತು. ನಗರದ ಅಸ್ಪತ್ರೆಯಲ್ಲಿ ಚಿಕಿತ್ಸೆಗೆ ಹೋದಾಗ ಹೃದಯಾಘಾತವಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದರು.

ಶಶಿದರ ಅವರು ಇತ್ತೀಚಿಗಷ್ಟೇ ಕನಕ ಮಿಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ರಾಜಕೀಯ ಸಮೀಕ್ಷೆಗಳಲ್ಲಿ ಎತ್ತಿದ ಕೈಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next