Advertisement

Udupi Video ಘಟನೆ ತಮಾಷೆಯಲ್ಲ, ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಬಿಜೆಪಿ ಎಚ್ಚರಿಕೆ

02:12 PM Jul 28, 2023 | Team Udayavani |

ಉಡುಪಿ: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಘಟನೆಗೆ ಸಂಬಂಧಿಸಿದಂತೆ ಉಡುಪಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಕಡಿಯಾಳಿ ಬಿಜೆಪಿ ಕಚೇರಿಯಿಂದ ಬನ್ನಂಜೆ ಎಸ್.ಪಿ ಕಚೇರಿಯವರಿಗೆ ಪ್ರತಿಭಟನಾ ಮೆರೆವಣಿಗೆ ನಡೆಸಲಾಯಿತು.

Advertisement

ಪ್ರತಿಭಟನೆಯಲ್ಲಿ ಮಾತನಾಡಿದ ಉಡುಪಿ ಶಾಸಕ ಯಶಪಾಲ್ ಸುವರ್ಣ, “ಇದು ತಮಾಷೆಯ ವಿಚಾರವಲ್ಲ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಸುಮ್ಮನಿರುವುದಿಲ್ಲ. ಗೃಹ ಸಚಿವರ ಮಗ ಲಿಂಗ ಪರಿವರ್ತನೆ ಮಾಡಿಕೊಂಡಿರುವುದು ತಮಾಷೆಗೆ ಆಗಿರಬಹುದು, ಆದರೆ ಇದು ತಮಾಷೆಯ ವಿಚಾರವಲ್ಲ ಎಂದು ಗುಡುಗಿದರು.

ರಾಜ್ಯದ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಕಿವಿ ಮತ್ತು ಮೂಗಿಲ್ಲದಂತೆ ವರ್ತಿಸುತ್ತಿದ್ದಾರೆ. ವಿಡಿಯೋ ಚಿತ್ರೀಕರಣ ಮಾಡಲು ವಿದ್ಯಾರ್ಥಿಗಳಿಗೆ ಶಕ್ತಿ ತುಂಬಿರುವುದು ಯಾರು ಮತ್ತು ಹಿಂದೆ ಯಾರಿದ್ದಾರೆಂದು ಸಂಪೂರ್ಣ ತನಿಖೆಯಾಗಬೇಕು. ಇದರ ಹಿಂದೆ ಪಿಎಫ್ ಐ ಮಹಿಳಾ ಘಟಕದ ಕೈವಾಡವೂ ಇರಬಹುದು. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಶಾಸಕ ಯಶಪಾಲ್ ಸುವರ್ಣ ಆಗ್ರಹಿಸಿದರು.

ಉಗ್ರ ಹೋರಾಟ: ಇದೇ ವೇಳೆ ಮಾತನಾಡಿದ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳಿ, ಹಿಂದುತ್ವ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳಬಾರದು. ಕಾಂಗ್ರೆಸ್ ಮತ್ತು ಕಮುನ್ಯಿನಸ್ಟರ ಹೆಣ್ಣುಮಕ್ಕಳನ್ನು ಕಾಪಾಡಲು ಕೊನೆಗೆ ಸಂಘ ಪರಿವಾರವೇ ಬೆಕಾಗುತ್ತದೆ. ಇಂತಹ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು, ಸರ್ಕಾರ ಹಸ್ತಕ್ಷೇಪ ಮಾಡಬಾರದು. ಕಠಿಣ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಇದನ್ನೂ ಓದಿ:ದೆಹಲಿ-ಮುಂಬೈ ವಿಮಾನದಲ್ಲಿ ವೈದ್ಯೆಗೆ ಕಿರುಕುಳ… 47 ವರ್ಷದ ಪ್ರೊಫೆಸರ್ ಬಂಧನ

Advertisement

ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಮಾತನಾಡಿ, ಕಾಲೇಜು ಆಡಳಿತ ಮಂಡಳಿ ತಕ್ಷಣವೇ ಆಡಳಿತಾಧಿಕಾರಿ ಅಬ್ದುಲ್ ಖಾದರ್ ರನ್ನು ಅಮಾನತು ಮಾಡೇಕು. ಅದೇ ರೀತಿ ತಪ್ಪಿತಸ್ಥ ವಿದ್ಯಾರ್ಥಿನಿಯರನ್ನು ಡಿಬಾರ್ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೇರಿ ಹಲವರು ಭಾಗಿಯಾಗಿದ್ದರು. ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಐಜಿ ಚಂದ್ರಗುಪ್ತ ಭೇಟಿ: ಎಸ್ ಪಿ ಕಚೇರಿಗೆ ಪಶ್ಚಿಮ ವಲಯ ಐಜಿ ಚಂದ್ರಗುಪ್ತ ಅವರು ಶುಕ್ರವಾರ ಭೇಟಿ ನೀಡಿದರು. ತನಿಖಾಧಿಕಾರಿ ಮಂಜುನಾಥ ಗೌಡ ಅವರಿಂದ ಪ್ರಕರಣದ ಬಗೆಗಿನ ಸಂಪೂರ್ಣ ವಿವರ ಪಡೆದುಕೊಂಡರು. ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ ಸಹಿತ ಅಧಿಕಾರಿಗಳು ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next