Advertisement

ಉಡುಪಿ: ಮತದಾನ ಜಾಗೃತಿ ಪ್ರಚಾರ ಸಾಮಗ್ರಿ ಬಿಡುಗಡೆ

07:50 AM Apr 08, 2018 | |

ಉಡುಪಿ: ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕೆಂಬ ಇರಾದೆಯಿಂದ ಜಿಲ್ಲಾ ಸ್ವೀಪ್‌ ಸಮಿತಿ ಸಿದ್ಧಪಡಿಸಿದ ವಿವಿಧ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಬಿಡುಗಡೆಗೊಳಿಸಿದರು. ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ, ಜಿ.ಪಂ. ಸಿಇಒ ಶಿವಾನಂದ ಕಾಪಶಿ, ಅಪರ ಜಿಲ್ಲಾಧಿಕಾರಿ ಅನುರಾಧಾ, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಉಪಸ್ಥಿತರಿದ್ದರು. 

Advertisement

2013ರ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಮತಗಟ್ಟೆಗಳ ಮತದಾರರಿಗೆ ಕೊಡುವ “ಮತದಾನದ ಮಮತೆಯ ಕರೆಯೋಲೆ’ ಆಮಂತ್ರಣ ಪತ್ರಿಕೆ, ಯಕ್ಷಗಾನ, ಯಕ್ಷಗಾನದ ಹಾಡುಗಳು, ಕನ್ನಡ ಮತ್ತು ತುಳು ಹಾಡುಗಳು, ಐಕಾನ್‌ ಆಗಿರುವ ಮಮತಾ ಪೂಜಾರಿ, ಕಾರ್ತಿಕ್‌ ಕಟೀಲು ಅವರ ಸಂದೇಶ, ವೀಡಿಯೋ ಕ್ಲಿಪ್ಪಿಂಗ್ಸ್‌ಗಳನ್ನು ಬಿಡುಗಡೆಗೊಳಿಸಲಾಯಿತು. ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಸ್ವೀಪ್‌ ಸಮಿತಿಯಿಂದ ಪ್ರಚಾರ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. 

2013ರಲ್ಲಿ ಕಡಿಮೆ ಮತದಾನವಾದ ಸುಮಾರು 70 ಮತಗಟ್ಟೆಗಳ ಸುಮಾರು 7,000 ಮನೆಗಳಿಗೆ ಆಮಂತ್ರಣ ಪತ್ರಿಕೆಯನ್ನು ತಲುಪಿಸಿ ಮತದಾನ ಮಾಡಲು ಪ್ರೇರೇಪಿಸಲಾಗುವುದು ಎಂದು ಜಿ.ಪಂ. ಸಿಇಒ ತಿಳಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next